7:25 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಅಕ್ರಮ ಜಾನುವಾರು ಸಾಗಾಟದ ಮೇಲೆಯೂ ಕ್ರಮ,  ಹಲ್ಲೆ ನಡೆಸಿದರೂ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

July 27, 2020, 2:07 PM

ಮಂಗಳೂರು(reporterkarnataka news): 

ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ  ಜಿಲ್ಲಾಧಿಕಾರಿ ಸಿಂಧೂ ರೂಪೇಶ್  ಪಶುಪಾಲನಾ ಇಲಾಖೆಗೆ ಸೂಚಿಸಿದ್ದು, ಅಕ್ರಮ ಜಾನುವಾರು ಸಾಗಾಟ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನು ಕೈಗೆತ್ತಿಕೊಂಡರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ

 ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ ಬಗ್ಗೆ ಗಮನಹರಿಸಲು ಅವರು ತಿಳಿಸಿದರು.
ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮವಾಗಿ ಗೋವು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು  ಕ್ರಮ ಕೈಗೊಳ್ಳಬೇಕು.  ಯಾವುದೇ ಕಾರಣಕ್ಕೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಸು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳನ್ನು ಸಾಗಾಣಿಕೆ ಅಥವಾ ವಧೆ ಮಾಡುವಂತಿಲ್ಲ. ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು. 
ಅಕ್ರಮವಾಗಿ ಅಥವಾ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಣಿಕೆ ಮಾಡುವ ಸಂಧರ್ಭದಲ್ಲಿ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಕಾನೂನ್ನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.   
ಕೋವಿಡ್ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನರು ಸೇರದಂತೆ ನಿಗಾವಹಿಸಿ, ಆದಷ್ಟು ಮನೆಯಲ್ಲಿಯೇ ಪ್ರಾರ್ಥನೆಯನ್ನು ಸಲ್ಲಿಸಲು ಪ್ರತಿ ಠಾಣೆಯ ವ್ಯಾಪ್ತಿಯಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಿ ಜನರನ್ನು ಮನವೊಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಬಕ್ರೀದ್ ಸಂದರ್ಭದಲ್ಲಿ ಪ್ರಮುಖ ಪ್ರಾರ್ಥನಾ ಮಂದಿರಗಳಲ್ಲಿ ಸೂಕ್ತ ಬ್ಯಾರಿಕೇಡ್‍ಗಳನ್ನು ಮಹಾನಗರಪಾಲಿಕೆ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತು, ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೋಲಿಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.  ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು