7:55 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಅಪಘಾತ, ತೆರಿಗೆ ವಂಚನೆ ತಡೆಗೆ ಯೆಲ್ಲೋ ಬೋರ್ಡ್ ವಾಹನಕ್ಕೆ ನಾವಿಕ ತಂತ್ರಜ್ಞಾನ

July 28, 2020, 9:35 AM

ಬೆಂಗಳೂರು(reporterkarnataka news):

ಹಳದಿ ಬೋರ್ಡ್ ವಾಹನಕ್ಕೆ ‘ನಾವಿಕ’ ತಂತ್ರಜ್ಞಾನ ಅಳವಡಿಕೆ ಮಾಡಲಾಗುವುದು. ಹೆಚ್ಚುತ್ತಿರುವ ಅಪಘಾತ, ತೆರಿಗೆ ವಂಚನೆ ತಡೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಆಗುತ್ತಿರುವ ತೆರಿಗೆ ವಂಚನೆ ತಡೆಯುವ ಸಲುವಾಗಿ ಮತ್ತು ಹೆಚ್ಚುತ್ತಿರುವ ಅಪಘಾತ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲಾ ಹಳದಿ ಬೋರ್ಡು ವಾಹನಗಳಿಗೆ ಇಸ್ರೋದ ನಾವಿಕ ತಂತ್ರಜ್ಞಾನವನ್ನು ಬಳಕೆ ಮಾಡುವ ಕುರಿತಾಗಿ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಲಾರಿ, ಬಸ್, ಗೂಡ್ಸ್ ವಾಹನ, ಓಲಾ, ಉಬರ್ ಸೇರಿದಂತೆ ಎಲ್ಲ ಹಳದಿ ಬೋರ್ಡ್ ವಾಹನಗಳಿಗೆ ನಾವಿಕ ತಂತ್ರಜ್ಞಾನ ಅಳವಡಿಸಲಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ಕಂಟ್ರೋಲ್ ರೂಂ ಸ್ಥಾಪಿಸಿ ನಿರ್ವಹಣೆ ಮಾಡಲಾಗುವುದು ಎಂದು ಹೇಳಿದ್ದಾರೆ.ನಾವಿಕ ತಂತ್ರಜ್ಞಾನ ಅಳವಡಿಕೆಯಿಂದ ಅಪಘಾತ ತಡೆಯಬಹುದು, ತೆರಿಗೆ ವಂಚನೆಗೆ ಬ್ರೇಕ್ ಬಹುದಾಗಿದೆ ಎಂದು ತಿಳಿಸುವ ಅವರು ಈ ಸಲುವಾಗಿ ಕೇಂದ್ರ ಸಚಿವರ ಭೇಟಿ ಮಾಡಲು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು