ಇತ್ತೀಚಿನ ಸುದ್ದಿ
ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಪಾಪಿ ತಂದೆಯಿಂದ ನಿರಂತರ ಅತ್ಯಾಚಾರ
July 20, 2020, 11:19 AM

ಕಾಸರಗೋಡು(reporterkarnataka): ಕಾಸರಗೋಡು ಸಮೀಪದ ನಿಲೇಶ್ವರ ಎಂಬಲ್ಲಿ ತಂದೆ ತನ್ನ 16ರ ಹರೆಯದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತಂದೆಯ ಜತೆಗೆ ಇತರ ಆರು ಮಂದಿ ಈ ಹೀನ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ತನ್ನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ತಾಯಿಯ ವಿರುದ್ದ ಕೂಡ ಮೊಕದ್ದಮೆ ದಾಖಲಿಸುವ ಬಗ್ಗೆ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ವಿಷಯ ತಿಳಿದಿದ್ದರೂ ಮಗಳ ರಕ್ಷಣೆಗೆ ತಾಯಿ ಮುಂದಾಗಲಿಲ್ಲ ಎಂದು ಆರೋಪಿಸಲಾಗಿದೆ.
ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಬಾಲಕಿಯ ತಂದೆಯ ವಿರುದ್ದ ಈ ಹಿಂದೆ ಕೂಡ ಪೋಕ್ಸೋದಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ವರದಿಯಾಗಿದೆ