ಇತ್ತೀಚಿನ ಸುದ್ದಿ
ಅಯೋಧ್ಯೆಗೆ ತೆರಳಿದ ಆದಿಚುಂಚನಗಿರಿ ಮಠದ
August 4, 2020, 6:58 AM

ಬೆಂಗಳೂರು(reporterkarnataka news): ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜೆಯಲ್ಲಿ ಭಾಗವಹಿಸಲು ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅಯೋಧ್ಯೆಗೆ ತೆರಳಿದ್ದಾರೆ.
ಇಂದು ಬೆಳಿಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅವರು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.
ಈ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯದ ಎಂಟು ಮಂದಿ ಗಣ್ಯರಿಗೆ ಆಮಂತ್ರಣ ನೀಡಲಾಗಿತ್ತು. ಭೂಮಿ ಪೂಜೆ ಸಮಾರಂಭದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.