ಇತ್ತೀಚಿನ ಸುದ್ದಿ
ಅಯೋಧ್ಯೆಯಲ್ಲಿ ಭೂಮಿ ಪೂಜೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ, ಹೆಚ್ಚುವರಿ ಪೊಲೀಸ್ ಪಡೆ
August 5, 2020, 2:24 AM

ಮಂಗಳೂರು(reporterkarnataka news): ಶ್ರೀರಾಮನ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. . ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲಾಗಿರುವ ದಕ್ಷಿಣ ಕನ್ನಡದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಕೆಎಸ್ಆರ್ ಪಿ ಮತ್ತು ಸಿ ಎ ಆರ್ ಹೆಚ್ಚು ವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ
ರಾಮ ಮಂದಿರದ ನಿರ್ಮಾಣ ಕಾರ್ಯ ಇಂದು ಆರಂಭವಾಗಲಿದೆ. ಮಧ್ಯಾಹ್ನ 12.30ರ ಶುಭ ಮೂಹೂರ್ತದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12. 40ಕ್ಕೆ ಮೊದಲಿಗೆ ಇಟ್ಟಿಗೆ ಪ್ರತಿಷ್ಟಾಪಿಸಲಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ಸಮಾರಂಭಕ್ಕೆ ಎಲ್ಲ ಸಿದ್ದತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ.