10:38 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಆಗಸ್ಟ್ ಮೊದಲ ವಾರದಲ್ಲೆ ಎಸ್‌ಎಸ್‌ಎಲ್‌ಸಿ ರಿಸಲ್ಟ್.! : ಸಚಿವ ಎಸ್.ಸುರೇಶ್ ಕುಮಾರ್

July 20, 2020, 4:07 PM

ಎಸ್‌ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರು ನಗರದ ವಿವಿಧೆಡೆ ಐದು ಎಸ್‌ಎಸ್‌ಎಲ್ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದೆ, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಬೆಂಗಳೂರು ಮಹಾನಗರದಲ್ಲಿ ಶೇ. 45 ರಷ್ಟು ಶಿಕ್ಷಕರು ಹಾಜರಾಗಿದ್ದರು ಎಂದು ತಿಳಿಸಿದ್ದಾರೆ

8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ. ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು