9:39 PM Thursday28 - January 2021
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕದ ನಿರ್ಲಕ್ಷ್ಯ: ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್… ಇಬ್ಬರು ಪುತ್ರಿಯನ್ನು ಬೆತ್ತಲೆಗೊಳಿಸಿ ಬಡಿದು ಸಾಯಿಸಿದ ಪಾಪಿ ದಂಪತಿ ಶಿವ- ಪಾರ್ವತಿಯರಂತೆ!  ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

ಇತ್ತೀಚಿನ ಸುದ್ದಿ

ಆಟಿಯ ಮೊದಲ ಲಾಕ್ ಡೌನ್: ಎರಡನೇ ದಿನವೂ ಮೌನಕ್ಕೆ ಜಾರಿದ ದ.ಕ. ಜಿಲ್ಲೆ

July 17, 2020, 5:43 AM

ಮಂಗಳೂರು (reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ಎರಡನೇ ಸುತ್ತಿನ ಲಾಕ್ ಡೌನ್ ಪರಿಣಾಮ ಎರಡನೇ ದಿನವಾದ ಶುಕ್ರವಾರ ಕೂಡ ಜಿಲ್ಲೆಯಲ್ಲಿ ಜನಜೀವನ ಮತ್ತೆ ಸ್ತಬ್ದಗೊಂಡಿತು.

ಎರಡನೇ ಹಂತದ ಲಾಕ್ ಡೌನ್ ನ ಮಾರ್ಗಸೂಚಿ ಪ್ರಕಾರ ಬೆಳಗ್ಗೆ 11 ಗಂಟೆ ವರೆಗೆ ಜನರಿಗೆ ದಿನನಿತ್ಯದ ಸಾಮಗ್ರಿ ಒಯ್ಯಲು ಅವಕಾಶ ನೀಡಲಾಯಿತು. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ತೀವ್ರಗೊಂಡಿದ್ದು, ಆಟೋ ಮಾಸ ಆರಂಭಗೊಂಡಿದೆ. ಜನರು ಮಳೆಯ ನಡುವೆ ತಮ್ಮ ಅಗತ್ಯ ವಸ್ತುಗಳಿಗಾಗಿ ಮಾರುಕಟ್ಟೆ, ಅಂಗಡಿ- ಮುಂಗಟ್ಟು ತಡಕಾಡಿದರು.

11 ಗಂಟೆ ಕಳೆಯುತ್ತಿದ್ದಂತೆ ನಗರದ ಎಲ್ಲ ಪ್ರಮುಖ ರಸ್ತೆಗಳು ಸೇರಿದಂತೆ ಗಲ್ಲಿ ಗಲ್ಲಿಗಳು ಬಿಕೋ ಎನ್ನಲಾರಂಭಿಸಿತು. ಜನರು ಸ್ವಯಂಪ್ರೇರಿತರಾಗಿ ರಸ್ತೆಗೆ ಇಳಿಯದೆ ಸಹಕರಿಸಿದರು.

ನಗರದ ಸೆಂಟ್ರಲ್ ಮಾರ್ಕೆಟ್ ಕಳೆದ ಲಾಕ್ ಡೌನ್ ಅವಧಿಯಲ್ಲೇ ಮುಚ್ಚಿರುವುದರಿಂದ ಲಾಕ್ ಡೌನ್ ಸಡಿಲಿಕೆ ಅವಧಿಯಲ್ಲಿಯೂ ಇಲ್ಲಿನ ರಸ್ತೆಗಳಲ್ಲಿ ಜನ ಸಂಚಾರ ತೀರಾ ವಿರಳವಾಗಿತ್ತು. ಬೆಳಗ್ಗೆ 11ರ ಬಳಿಕ ನಗರದ ಸ್ಟೇಟ್ ಬ್ಯಾಂಕ್ ಪರಿಸರ, ಮೀನು ಮಾರುಕಟ್ಟೆ, ಸೆಂಟ್ರಲ್ ಮಾರ್ಕೆಟ್, ಅತ್ತಾವರ ಹಾಗೂ ಕಂಕನಾಡಿ ರೈಲ್ವೆ ಸ್ಟೇಶನ್,  ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕಂಕನಾಡಿ ಮಾರುಕಟ್ಟೆ, ಹಳೆ ಬಂದರು ಪ್ರದೇಶ ಭಣಗುಟ್ಟುತ್ತಿತ್ತು.

ಹೊರ ಊರಿನಿಂದ ನಗರ ಪ್ರವೇಶಿಸುವ ಎಲ್ಲ ರಸ್ತೆಗಳಲ್ಲಿ ಪೊಲೀಸ್ ನಾಕಾಬಂಧಿ ಹಾಕಲಾಗಿತ್ತು.  ಎಲ್ಲ ಪ್ರಮುಖ ರಸ್ತೆಗಳಲ್ಲಿ ಅಲ್ಲೊಬ್ಬರು, ಇಲ್ಲೊಬ್ಬರು ತಿರುಗಾಡುತ್ತಿರುವುದು ಬಿಟ್ಟರೆ ನಗರ ಸಂಪೂರ್ಣ ಖಾಲಿ ಖಾಲಿಯಾಗಿತ್ತು. ನಗರದ ಪ್ರವೇಶಿಸುವ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ ನಲ್ಲಿ ಮುಚ್ಚುವ  ಮೂಲಕ ನಗರದಲ್ಲಿ ಓಡಾಡುವವರ ಸಂಖ್ಯೆಯನ್ನು ಶೂನ್ಯಕ್ಕೆ  ಇಳಿಸಲಾಯಿತು. 

ಸ್ಟೇಟ್ ಬ್ಯಾಂಕ್ ಪ್ರವೇಶಿಸುವ ಆರ್ ಟಿಒ ಕಚೇರಿ ಎದುರು ಪೊಲೀಸ್ ನಾಕಾಬಂಧಿ ಹಾಕಲಾಗಿತ್ತು. ವೈದ್ಯಕೀಯ ಹಾಗೂ ಇತರ ತುರ್ತು ಅಗತ್ಯಕ್ಕಾಗಿ ಸ್ವಂತ ವಾಹನಗಳ ಮೂಲಕ ಅಗಮಿಸಿದವರನ್ನು ಸರಿಯಾಗಿ ಪರಿಶೀಲನೆ ನಡೆಸಿ ಹೋಗಲು ಅನುಮತಿ ನೀಡಲಾಗುತ್ತಿತ್ತು.

ಪೊಲೀಸ್ ಗಸ್ತು ಜತೆ ಜಿಲ್ಲಾ ಆರೋಗ್ಯ ಇಲಾಖೆ, ಮಂಗಳೂರು ಮಹಾನಗರಪಾಲಿಕೆ ಆರೋಗ್ಯ ವಿಭಾಗದ ವಾಹನಗಳು , ಅಧಿಕಾರಿಗಳ ವಾಹನಗಳು ನಗರದಲ್ಲಿ ಓಡಾಟ ನಡೆಸುತ್ತಿದ್ದವು.

ಜಿಲ್ಲೆಯ ಇತರ ತಾಲೂಕುಗಳಲ್ಲಿ ಕೂಡ ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು