8:10 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಉರ್ವ ಮೈದಾನಕ್ಕೆ ಹೊನಲು ಬೆಳಕು ಅಳವಡಿಕೆ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

August 1, 2020, 9:03 AM

ಮಂಗಳೂರು(reporterkarnataka news): ಉರ್ವ ಕ್ರಿಕೆಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶಾಸಕ ವೇದವ್ಯಾಸ್ ಕಾಮತ್ ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. 

ಈ ಸಂದರ್ಭ ಮಾತನಾಡಿದ ಅವರು, ಸ್ಥಳೀಯ ಕ್ರೀಡಾಪಟುಗಳ‌ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.

ಕಾರ್ಪೊರೇಟರ್ ಗಳಾದ ಸಂಧ್ಯಾ ಮೋಹನ್ ಆಚಾರ್, ಗಣೇಶ್ ಕುಲಾಲ್, ಜಗದೀಶ್ ಶೆಟ್ಟಿ ಬೋಳೂರ್, ಜಯಲಕ್ಷ್ಮೀ ಶೆಟ್ಟಿ, ಜಯಶ್ರೀ ಕುಡುವ ಹಾಗೂ  ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್, ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲಾ, ರಮೇಶ್ ಹೆಗ್ಡೆ, ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ, ವಸಂತ ಜೆ. 

ಪೂಜಾರಿ, ವೆಂಕಟೇಶ್ ಆಚಾರ್, ಗುರುಚರಣ್ ಎಚ್. ಆರ್ . ಅಮೃತ ಶೆಣೈ,  ರಾಧಿಕಾ ಅರವಿಂದ್,  ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ, ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು