ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟ: ಕೊರೊನಾ ಮಧ್ಯೆಯೇ ನಡೆದ ಪರೀಕ್ಷೆ
August 10, 2020, 3:14 AM

ಬೆಂಗಳೂರು(reporterkarnataka news): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿರುವ ಎಸೆಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಸುಮಾರು 7.50 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.
ಕೊರೊನಾ ಮಹಾ ಮಾರಿಯ ಮಧ್ಯೆ ಪರೀಕ್ಷೆ ನಡೆಸುವುದು ಭಾರೀ ಸವಾಲಾಗಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ತೀವ್ರ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಸವಾಲನ್ನು ಮೆಟ್ಟಿ ನಿಂತು ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಿದ ಹೆಗ್ಗಳಿಕೆ ಶಿಕ್ಷಣ ಇಲಾಖೆಯದ್ದಾಗಿದೆ.