ಇತ್ತೀಚಿನ ಸುದ್ದಿ
ಒಂದು ವರ್ಷ ಪೂರೈಸಿದ ಬಿಜೆಪಿ ಸರಕಾರ: ಪುಸ್ತಕ ಬಿಡುಗಡೆ, ಸಂಭ್ರಮಾಚರಣೆ
July 27, 2020, 2:19 PM

ಮಂಗಳೂರು(reporterkarnataka news):
ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಜಿಪಂ ಕಚೇರಿಯಲ್ಲಿ ಸೋಮವಾರ ಸಂಭ್ರಮ ಆಚರಿಸಲಾಯಿತು.


ಸರಕಾರದ ಸಾಧನೆ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸರಕಾರದ ಸಾಧನೆ ಬಗ್ಗೆ ಮಾತನಾಡಿದರು.