11:06 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಭಾರಿಯಿಂದ ಅತೀ ಭಾರಿ ಮಳೆ ನಿರೀಕ್ಷೆ

August 4, 2020, 11:50 AM

ಮಂಗಳೂರು(reporterkarnataka news): ಹವಾಮಾನ ವೈಪರೀತ್ಯದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಭಾರಿಯಿಂದ ಅತೀ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.4 ಮತ್ತು 5ರಂದು ಭಾರಿಯಿಂದ ಅತೀ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 204.5 ಮೀಮೀ.ಗಿಂತ ಅಧಿಕ ಮಳೆ ಬೀಳುವ ನಿರೀಕ್ಷೆಯಿದೆ. ಪ್ರವಾಸಿಗರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಆ.4ರಂದು ಮಧ್ಯಾಹ್ನ 1 ಗಂಟೆಯಿಂದ ಆ.5ರಂದು ಬೆಳಗ್ಗೆ 8.30ರ ತನಕ ರೆಡ್ ಅಲರ್ಟ್ ಇದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು