3:24 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸಿದ್ದಾಂತ ಮೇಲೆ ನಂಬಿಕೆ ಇಟ್ಟವರಿಗೆ ಪಕ್ಷಕ್ಕೆ ಸ್ವಾಗತ: ಮಾಜಿ ಸ್ಪೀಕರ್ ರಮೇಶ್ ಕುಮಾರ್

November 13, 2020, 10:52 PM

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com 

ಕಾಂಗ್ರೆಸ್‌ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷಕ್ಕೆ ಬರುವವರನ್ನು ಸ್ವಾಗತಿಸಲಾಗುವುದು ಎಂದು ಮಾಜಿ ಸಭಾಪತಿ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.

ಕೋಲಾರದ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಂಗ್ರೆಸ್‌ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿ, ಈ ಹಿಂದೆ ಕಾರಣಾಂತದಿಂದ ಪಕ್ಷದಿಂದ ದೂರವಾಗಿದ್ದ ಕುಟುಂಬಗಳು ಮತ್ತೆ ಹಿಂದಿರುಗಿವೆ. ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಕೆಲವೇ ತಿಂಗಳುಗಳಲ್ಲಿ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು. ಅದರಿಂದ ರೈತರ ಬದುಕು ಹಸನಾಗುತ್ತದೆ. ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುತ್ತದೆ. ಎಸ್ಸಿ, ಎಸ್‌ಟಿ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಕ್ಷಾತೀತವಾಗಿ ಕೃಷಿ ಕೊಳವೆ ಬಾವಿಗಳನ್ನು ನಿರ್ಮಿಸಿಕೊಡಲಾಗುವುದು. ಹಾಗೆಯೇ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.

ತಾಲೂಕಿನಲ್ಲಿ ಇನ್ನೂ 10 ವಸತಿ ಶಾಲೆಗಳನ್ನು ತೆರೆಯುವ ಉದ್ದೇಶ ಇದ್ದಿತು. ಅಷ್ಟರಲ್ಲಿ ಸರ್ಕಾರ ಬದಲಾಯಿತು. ಆ ಶಾಲೆಗಳನ್ನು ತೆರೆದಿದ್ದರೆ ಖಾಸಗಿ ಶಾಲೆಗಳ ಪಾರಮ್ಯ ಕುಸಿಯುತ್ತಿತ್ತು ಎಂದು ಹೇಳಿದರು.

  ‘ನಾನು ಸ್ವಾಭಿಮಾನ ಹಾಗೂ ಮಾನವತ್ವದ ನೆಲೆಯಲ್ಲಿ ರಾಜಕೀಯ ಮಾಡುತ್ತೇನೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು. ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಮುಂದೆ ಬರಬೇಕು. ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಯಾರೊಬ್ಬರಿಗೆ ಕಷ್ಟ ಎದುರಾದರೂ ಮನಸ್ಸು ಮಿಡಿಯುತ್ತದೆ‘ ಎಂದು ಹೇಳಿದರು.

  ಡಿ.ಕೆ.ರವಿ ಅವರ ಪತ್ನಿ ಕುಸುಮ ಅವರು ಆರ್‌.ಆರ್‌. ನಗರ ಕ್ಷೇತ್ರದಿಂದ ನಡೆದ ಮರು ಚುನಾವಣೆಯಲ್ಲಿ ಸೋತಿದ್ದು ದುರದೃಷ್ಟಕರ. ಕಾರಣಾಂತರದಿಂದ ಚಿಕ್ಕ ವಯಸ್ಸಿನಲ್ಲಿಯೇ ನೋವುಂಡ ಕುಸುಮ ಅವರ ಅಭ್ಯುದಯಕ್ಕಾಗಿ ಸಾಧ್ಯವಾದುದೆಲ್ಲವನ್ನೂ ಮಾಡಲಾಗುವುದು ಎಂದು ಹೇಳಿದರು.

  ಈ ಸಂದರ್ಭದಲ್ಲಿ ಹೊಗಳಗೆರೆ ಹಾಗೂ ಗಾಂಧಿ ನಗರ ಗ್ರಾಮಗಳಿಗೆ ಸೇರಿದ 20 ಕುಟುಂಬಗಳು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದರು.


  ರಾಯಲ್ಪಾಡ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ ರೆಡ್ಡಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಮುಖಂಡರಾದ ಎಂ.ಎಸ್‌.ಮುನಿರಾಜು, ಹೊಗಳಗೆರೆ ಆಂಜಿ, ವೆಂಕಟರವಣ, ಯಮನೂರು ನಾಗರಾಜ್‌, ಷರೀಫ್,ಮಾಂಜಮ್ಮ ಕೊಂಡಾಮರಿ ಕೆ.ಆರ್‌.ರಾಮಮೋಹನ್‌ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು