3:37 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಕೇರಳ ಸಿಎಂ ಕಚೇರಿಯಲ್ಲಿ ಸ್ವಪ್ನಾ ಸುರೇಶ್ ಭಾರಿ ಪ್ರಭಾವ: ಎನ್ ಐ ಎ ಬಹಿರಂಗ

August 6, 2020, 3:47 PM

ತಿರುವನಂತಪುರಂ(reporterkarnatakanews): ಚಿನ್ನಕಳ್ಳ ಸಾಗಾಟದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಕುರಿತಂತೆ ರಾಷ್ಟ್ರೀಯ ತನಿಖಾದಳ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ.  ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ವಿರೋಧಿಸಿ ನಡೆದ ವಾದದ ಸಂದರ್ಭದಲ್ಲಿ ಎನ್ ಐ ಎ ಈ ಗಂಭೀರ ಆರೋಪ ಮಾಡಿದೆ.

ಸ್ವಪ್ನಾ ಸುರೇಶ್  ಕೇರಳ ಮುಖ್ಯಮಂತ್ರಿ ಕಚೇರಿಯಲ್ಲಿ ಭಾರೀ ಪ್ರಭಾವ ಹೊಂದಿದ್ದರು. ಈ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿವೆ ಎಂದು ಎನ್ ಐ ಎ ನ್ಯಾಯಾಲಯಕ್ಕೆ ತಿಳಿಸಿದೆ. 

ಆರೋಪಿಗೆ ಜಾಮೀನು ನೀಡಿದರೆ ಅಧು ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕೂಡ ಇದೆ ಎಂದು ಎನ್ ಐ ಎ ನ್ಯಾಯಾಲಯಕ್ಕೆ ತಿಳಿಸಿದೆ. ಜಾಮೀನು ಅರ್ಜಿ ಕುರಿತ ತೀರ್ಪನ್ನು ನ್ಯಾಯಾಲಯ ಆಗಸ್ಟ್ 10ಕ್ಕೆ ಕಾಯ್ದಿರಿಸಿದೆ. ಇದೇ ವೇಳೆ ಮಾಜಿ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಶಿವಶಂಕರ್ ಮತ್ತು ಸ್ವಪ್ನಾ ನಡುವೆ ಕೇವಲ ಪರಿಚಯ ಮಾತ್ರ ಇತ್ತು. ಚಿನ್ನ ಕಳ್ಳಸಾಗಾಟದಲ್ಲಿ ಅವರು ಯಾವುದೇ ಪಾತ್ರ ವಹಿಸಿರುವ ಬಗ್ಗೆ ದಾಖಲೆ ಇದುವರೆಗೆ ದೊರೆತಿಲ್ಲ ಎಂದು ಎನ್ ಐ ಎ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು