ಇತ್ತೀಚಿನ ಸುದ್ದಿ
ಕೊರೊನಾ: ಉತ್ತರ ಪ್ರದೇಶದ ಸಚಿವೆ ಕಮಲ್ ರಾಣಿ ವರುಣ್ ಸಾವು
August 2, 2020, 7:41 AM

ನವದೆಹಲಿ(reporterkarnataka news):
ಕೊರೊನಾ ವೈರಸ್ ಪಾಸಿಟಿವ್ ನಿಂದ ಆಸ್ಪತ್ರೆ ಸೇರಿದ್ದ ಉತ್ತರ ಪ್ರದೇಶದ ಸಚಿವೆ ಕಮಲ್ ರಾಣಿ ವರುಣ್ ಅವರು ಭಾನುವಾರ ಲಕ್ನೋದಲ್ಲಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಸಚಿವರಾಗಿದ್ದ ಕಮಲ್ ರಾಣಿ ವರುಣ್ ಅವರು ಈ ಹಿಂದೆ ಜುಲೈ 18 ರಂದು ಹೊಸ ಕೊರೊನಾ ವೈರಸ್ಗೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಮಲ್ ರಾಣಿ ವರುಣ್ ಉತ್ತರ ಪ್ರದೇಶ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಮಲ್ ರಾಣಿ ವರುಣ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರು ಸಚಿವರಾಗಿದ್ದ ಸಮಯದಲ್ಲಿ “ಸಮರ್ಥವಾಗಿ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.