ಇತ್ತೀಚಿನ ಸುದ್ದಿ
ಕೊರೊನಾ ತಾಂಡವ: ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ
July 27, 2020, 8:17 AM

ತಿರುವನಂತಪುರಂ(reporterkarnatakanews): ಕೇರಳದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ಕೇರಳ ಸರ್ಕಾರ ತಳ್ಳಿಹಾಕಿದೆ. ಇಂದು ತಿರುವನಂತಪುರಂ ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಲಾಕ್ ಡೌನ್ ಅಪ್ರಾಯೋಗಿಕವಾಗಿದೆ. ಇದರಿಂದ ರೋಗ ಹರಡುವುದನ್ನು ತಡೆಗಟ್ಟಲು ಸಾಧ್ಯವಿಲ್ಲ. ಬದಲಾಗಿ ರೋಗ ಲಕ್ಷಣ ಕಂಡು ಬಂದಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿರ್ಬಂಧ ಹೇರುವುದರ ಮೂಲಕ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ಕೇರಳ ಸರ್ಕಾರ ಹೇಳಿದೆ.
ಕೇರಳದಲ್ಲಿ ಭಾನುವಾರ ಎಂಟು ಮಂದಿ ಕೊರೋನಾಕ್ಕೆ ಬಲಿಯಾಗಿದ್ದರು. ಶೇಕಡ 65 ಮಂದಿಗೆ ಸಂಪರ್ಕದ ಮೂಲಕ ಕೇರಳದಲ್ಲಿ ಕೊರೋನಾ ಹರಡಿದೆ ಎಂಬುದನ್ನು ದೃಢೀಕರಿಸಲಾಗಿದೆ.