12:37 PM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಕೊರೊನಾ ವಾರಿಯರ್ಸ್ ಎಂದು ಕರೆದರೆ ಸಾಲದು, ಸರಿಯಾಗಿ ಸಂಬಳ ಕೊಡಿ: ಮಾಧುರಿ ಬೋಳಾರ

July 28, 2020, 11:02 AM

ಮಂಗಳೂರು(reporterkarnataka news): ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಕೆಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಜೆಎಂ ಎಸ್) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ಮಂಗಳವಾರ ಮಿನಿ ವಿಧಾನ ಸೌಧ ಎದುರು ನಡೆಯಿತು.

ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಆಂಬುಲೆನ್ಸ್,  ಗರ್ಭಿಣಿ ಬಾಣಂತಿಯರು ಹಾಗೂ ಮಕ್ಕಳ ಪಾಲನೆಗೆ ಅಗತ್ಯವಾದ ಮಾತ್ರಶ್ರೀ ಯೋಜನೆಯನ್ನು ಮುಂದುವರಿಸುವುದು, ಪೌಷ್ಠಿಕ ಆಹಾರ ಪದಾರ್ಥಗಳನ್ನು ಕೇರಳ ಮಾದರಿಯಲ್ಲಿ ವಿತರಿಸುವುದು ಸಂಘಟನೆಯ ಇತರ ಬೇಡಿಕೆಗಳಾಗಿವೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಮಾಧುರಿ ಬೋಳಾರ್‌ ,  ಆಶಾ ಕಾತರ್ಯಕರ್ತರನ್ನು, ವೈದ್ಯರನ್ನು, ಪೊಲೀಸ್‌ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಕರೆಯುವ ಸರಕಾರ ವೇತನವನ್ನೇ ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ. ಈ ಸಂಕಷ್ಟದ ಸಂದರ್ಭದಲ್ಲಿ ಅತಿಥಿ ಶಿಕ್ಷಕರು ಮತ್ತು ಮನೆ ಕೆಲಸಗಾರರ ಕಷ್ಟವನ್ನು ಪರಿಗಣಿಸಿ ಸರಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. 

 ಜೆಎಂಎಸ್‌ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಯಂತಿ ಬಿ ಶೆಟ್ಟಿ,  ಮಾತನಾಡಿ  ಸರಕಾರ ಕೂಡಲೇ ಸಮಸ್ಯೆಗಳನ್ನು ಪರಿಹರಿಸಬೇಕು,  ಮಹಿಳೆಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. 

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ್‌  ಸ್ವಾಗತಿಸಿದರು.ಜಿಲ್ಲಾ ಮುಖಂಡರಾದ ವಿಲಾಸಿನಿ ವಂದಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರುಗಳಾದ ಲೋಲಾಕ್ಷಿ ಬಂಟ್ವಾಳ, ಭವ್ಯಾ ಕುಪ್ಪೆಪದವು, ರೋಹಿಣಿ ಜಲ್ಲಿಗುಡ್ಡೆ, ಪ್ರತಿಭಾ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು