2:10 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಕೊರೊನಾ ಹಿನ್ನೆಲೆಯಲ್ಲಿ ಪಾಲೆ ಕಷಾಯ ಮತ್ತಷ್ಟು ಮುನ್ನಲೆಗೆ

July 19, 2020, 6:23 AM


ಮಂಗಳೂರು: ಜುಲೈ19(reporterkarnataka news/ANP):
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆಟಿ ಅಮವಾಸ್ಯೆ ಪವಿತ್ರ ದಿನ. ಹಾಲೆ ಕಷಾಯ, ಸಮುದ್ರ ಸ್ನಾನ, ದೇಗುಲ, ಮಠ- ಮಂದಿರ, ದೈವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಸೋಮವಾರ ಮತ್ತೆ ಈ ಎಲ್ಲ ವೈಭವಗಳಿಗೆ ತುಳುನಾಡು ಸಾಕ್ಷಿಯಾಗಲಿದೆ.
ಆಟಿ ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ . ಈ ದಿನ ಹಾಲೆ ಮರ ದಿವ್ಯ ಔಷದಿಯಿಂದ ಕೂಡಿರುತ್ತದೆ ಎಂಬುದು ಹಿಂದಿನವರ ನಂಬಿಕೆ. ಏನೇ ಇರಲಿ ಈ ಕಷಾಯವಂತು ದೇಹದ ಆರೋಗ್ಯಕ್ಕೆ ಅತ್ಯುತ್ತಮ ಎನ್ನುದರಲ್ಲಿ ಸಂದೇಹವಿಲ್ಲ ಎಂದು ತುಳುನಾಡಿನ ಹಿರಿಯ ಜೀವಗಳು ಈಗಲೂ ಹೇಳುತ್ತಾರೆ.
ಪ್ರಸ್ತುತ ವರ್ಷ ಹಿಂದಿನ ವರ್ಷಗಳಂತೆ ಅಲ್ಲ. ಈ ವರ್ಷ ತುಳುನಾಡು ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಕೊರೊನಾ ಎಂಬ ವೈರಸ್ ಬಾಧಿಸಿದೆ. ವಿಶ್ವದ ಜನರು ಈಗಾಗಲೇ ಕೆಲವು ತಿಂಗಳ ಕಾಲ ಅಜ್ಞಾತವಾಸ ಅನುಭವಿಸಿ ಆಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಅನುಭವಿಸುತ್ತಿದ್ದಾರೆ. ಒಟ್ಟಿನಲ್ಲಿ ಕಷ್ಟದ ಈ ಕಾಲದಲ್ಲಿ ಜನರು ಈಗಾಗಲೇ ಹಲವು ವಿಧದ ಕಷಾಯಗಳಿಗೆ ಮೊರೆ ಹೋಗಿ ತಮ್ಮ ರೋಗ ನಿರೋಧಕ ಶಕ್ತಿ ವೃದ್ದಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲೆ ಕಷಾಯ ಈ ಬಾರಿ ಮತ್ತಷ್ಟು ಮುನ್ನಲೆಗೆ ಬರಲಿದೆ.
ಪಾಲೆ ಮರವನ್ನು ಗುರುತಿಸುವಲ್ಲಿ ನಾವು ಬಹಳ ಜಾಗರೂಕರಾಗಿರಬೇಕು. ಪಾಲೆ ಮರವನ್ನು ತಪ್ಪಾಗಿ ಗುರುತಿಸಿ ಮೇಲ್ನೋಟಕ್ಕೆ ಇದೆ ರೀತಿ ಕಾಣುವ ಕಾಸರಕ ಮರದ ಕಷಾಯ ಕುಡಿದು ಅನಾಹುತ ಸಂಭವಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದೆ ಇನ್ನೂ ಹಸಿರಾಗಿಯೇ ಇದೆ. ಆದ್ದರಿಂದ ಎಚ್ಚರಿಕೆ ಬಹಳ ಅಗತ್ಯ.
ಉಡುಪಿ , ದಕ್ಷಿಣ ಕನ್ನಡ ಹಾಗೂ ಕಾಸರಗೋಡು 
ಜಿಲ್ಲೆಗಳಲ್ಲಿ  ಒಂದು ವಿಶೇಷ ಸಂಪ್ರದಾಯವಿದೆ.  ಸೂರ್ಯೋದಯಕ್ಕೆ ಮೊದಲೇ ಪಾಲೆ ಮರ (ಹಾಲೆ ಮರ) ದ ಸನಿಹ ಹೋಗಿ ಬಿಳಿ ಕಲ್ಲಿನಿಂದ ಜಜ್ಜಿ ಆ ಮರದ ತೊಗಟೆಯನ್ನು ತೆಗೆದು ಬರಬೇಕು. ತೊಗಟೆಯನ್ನು ತೆಗೆಯುವಾಗ ಕಬ್ಬಿಣದ ಕತ್ತಿಯನ್ನು ಉಪಯೋಗಿಸಬಾರದು. ಅಂದು ಮನೆಮಂದಿಯೆಲ್ಲರೂ ಆರೋಗ್ಯವರ್ಧಕವಾದ ಪಾಲೆಯ ಅತಿ ಕಹಿಯಾದ ರಸವನ್ನು ಕುಡಿಯುತ್ತಾರೆ. ನಂತರ ತೆಂಗಿನ ಕಾಯಿ ತುರಿ ಹಾಕಿದ ಗಂಜಿ ಉಣ್ಣುತ್ತಾರೆ. ಮನೆ ಮಂದಿ ಸೇರಿ ಎಲ್ಲರೂ ಸಂಭ್ರಮಿಸುತ್ತಾರೆ.
ತುಳು ನಂಬಿಕೆ ಪ್ರಕಾರ ಪಾಲೆ ತೊಗಟೆಯ ರಸ ಒಂದು ವರ್ಷದ ಕಾಲ ಯಾವುದೇ ರೋಗ ರುಜಿನಗಳು ದೂರವಾಗುತ್ತದೆ. ಆಹಾರ ಸೇವನೆಗೆ ಮೊದಲು ಖಾಲಿ ಹೊಟ್ಟೆಗೆ ಸೇವಿಸಬೇಕು. ಈ ರೀತಿ ಸೇವಿಸುವುದರಿಂದ ಅನೇಕ ಬಗೆಯ ಔಷಧಿಗಳು ನಮ್ಮ ಶರೀರಕ್ಕೆ ಸೇರುತ್ತದೆ ಎಂಬ ಬಲವಾದ ನಂಬಿಕೆ ತುಳು ಜನ ಮಾನಸದಲ್ಲಿ ತುಂಬಿದೆ.
ಹಿಂದಿನ ಕಾಲದಲ್ಲಿ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ವಿಪರೀತ ಮಳೆ ಬರುತ್ತಿತ್ತು. ಮಳೆಗಾಲದ ಈ ತಿಂಗಳು ಒಂದು ಹೊತ್ತಿನ ಊಟಕ್ಕೂ ಕಷ್ಟವಿತ್ತಂತೆ. ಮಳೆಯಿಂದಾಗಿ ಶರೀರದಲ್ಲಿ ಕಫ ವೃದ್ಧಿಯಾಗಿ ಅಗ್ನಿ ಕುಂಠಿತವಾಗಿರುತ್ತದೆ. ಅಪೌಷ್ಟಿಕತೆಯಿಂದ ರೋಗಗಳೂ ಹೆಚ್ಚು. ಆದ್ದರಿಂದ ಈ ಮಾಸದಲ್ಲಿ ಆಟಿ ಕಳಂಜ ದೈವವು ಅಮಾವಾಸ್ಯೆಯಂದು ಅನೇಕ ಬಗೆಯ ಔಷಧೀಯ ಗುಣಗಳನ್ನು ತಂದು ಮರದಲ್ಲಿರಿಸುತ್ತದೆ. ಯಾರು ತೊಗಟೆಯ ರಸವನ್ನು ನಂಬಿಕೆಯಿಂದ ಸೇವಿಸುತ್ತಾರೆಯೋ ಅವರು ವರ್ಷಪೂರ್ತಿ ಆರೋಗ್ಯವಾಗಿರುತ್ತಾರೆ ಎಂಬ ನಂಬಿಕೆಯೂ ಬಲವಾಗಿದೆ.
ಆಟಿ ಅಮಾವಾಸ್ಯೆ ಪಾಲೆ ಕೆತ್ತೆ ಸಂಗ್ರಹಿಸುವಾಗ ಎಚ್ಚರ ಅಗತ್ಯ. ಪ್ರಾಯಶಃ ಕರಾವಳಿಯಲ್ಲಿ ಮಳೆ ಹೆಚ್ಚಿಗೆ ಬರುವ ಕಾರಣ ಈ ಸಂಪ್ರದಾಯ ಕರಾವಳಿಯಲ್ಲಿ ಮಾತ್ರ ಚಾಲ್ತಿಯಲ್ಲಿದೆ. 
ಅದೇ ದಿನ ಮುಂಜಾವ ತೊಗಟೆ ತೆಗೆಯಲು ಹೋಗುತ್ತಾರೆ. ನಸುಕಿನಲ್ಲಿ ಸರಿಯಾಗಿ ತೋರದ ಕಾರಣ ಹಾಲೆ ಮರದ ಬದಲು ಬೇರೊಂದು ಮರದ ಕೆತ್ತೆ ತಂದು ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಯೂ ಇರುವುದರಿಂದ ಜಾಗರೂಕತೆ ವಹಿಸಬೇಕು. ಪಾಲೆ ಮರದ ರೀತಿ ಕಾಣುವ ಕಾಸರ್ಕ (ಕಾಸಾನು) ಮರದ ತೊಗಟೆ ಯನ್ನು ತಂದು ಜೀವಕ್ಕೆ ಅಪಾಯ ಮಾಡಿಕೊಂಡಿರುವ ಉದಾ ಹರಣೆಗಳು ಇವೆ. ಹಿಂದಿನ ದಿನವೇ ಗುರುತಿಸಿ ಮರುದಿನ ಸಂಗ್ರಹಿಸುವುದು ಉತ್ತಮ. ಇಲ್ಲವಾದರೆ ಪಾಲೆ ಮರದ ಎಲೆಯನ್ನು ಸ್ಪಷ್ಟವಾಗಿ ಗುರುತಿಸಿ ಅದರ ತೊಗಟೆಯನ್ನು ತೆಗೆಯಬೇಕು. ಹಾಲೆ ಮರವನ್ನು ಆಯುರ್ವೇದದಲ್ಲಿ ಸಪ್ತಪರ್ಣ ಎನ್ನುತ್ತಾರೆ. ಈ ಮರದ ಎಲೆಗಳಲ್ಲಿ ಏಳು ಎಲೆಗಳಿರುವ ಕಾರಣ ಸಪ್ತ ಪರ್ಣ ಎಂದು ಹೆಸರು ಬಂದಿರಬೇಕು. ಹೀಗಾಗಿ ಸಪ್ತಪರ್ಣಿ ಎಂದೂ ಕರೆಯುತ್ತಾರೆ.
ಪಾಲೆ ಮರದಲ್ಲಿ ಜ್ವರ, ಕ್ಯಾನ್ಸರ್‌ನಂತಹ ಕಾಯಿಲೆಗಳನ್ನು ಗುಣಪಡಿಸುವ ಹಲವು ಬಗೆಯ ಔಷಧೀಯ ಗುಣವಿದೆ. ಆಯುರ್ವೇದ ಔಷಧಿಗಳಲ್ಲಿ ಇದು ಧಾರಾಳವಾಗಿ ಬಳಕೆಯಾಗುತ್ತಿದೆ. ಎಷ್ಟೋ ಔಷಧಿಗಳನ್ನು ಸೇವಿಸುವವರಿಗೆ ಆ ಔಷಧಿಯಲ್ಲಿ ಹಾಲೆ ಮರದ ಅಂಶಗಳಿವೆ ಎನ್ನುವುದೂ ಗೊತ್ತಿರುವುದಿಲ್ಲ. ಬ್ರಾಹ್ಮಿà ಮುಹೂರ್ತದಲ್ಲಿ ಮರಗಳಲ್ಲಿ ಉದ್ದೇಶಿತ ಗುಣಗಳು ಹೆಚ್ಚಿಗೆ ಇರುವುದರಿಂದ ಮುಂಜಾವವೇ ತೊಗಟೆ ಸಂಗ್ರಹಿಸುವ ಕ್ರಮ ಚಾಲ್ತಿಗೆ ಬಂದಿರಬಹುದು.
ವಿಶೇಷವೆಂದರೆ ಆಯುರ್ವೇದ ಶಾಸ್ತ್ರದಲ್ಲಿ ಹೇಳಿರುವ ಈ ವಿಚಾರವನ್ನು ಆಯುರ್ವೇದ ತಿಳಿವಳಿಕೆ ಇಲ್ಲದ ಸಾಮಾನ್ಯ ವ್ಯಕ್ತಿಗಳೂ ಪಾಲಿಸುವ ಸಂಸ್ಕೃತಿ ಕಾಣಬಹುದಾಗಿದೆ. 
ತೊಗಟೆಯನ್ನು ನೀರು ಮಿಶ್ರ ಮಾಡಿ ಜಜ್ಜಿ ರಸವನ್ನು ತೆಗೆಯುತ್ತಾರೆ. ಇದನ್ನು ವ್ಯಕ್ತಿಯೊಬ್ಬ ಗರಿಷ್ಠ 24 ಮಿ.ಲೀ. ಸೇವಿಸಬಹುದು. ಕುದಿಸಿ ಕಷಾಯ ಮಾಡುವುದಾದರೆ ಗರಿಷ್ಠ 50 ಮಿ.ಲೀ. ಸೇವಿಸಬಹುದು. ಕೆಲವರು ಜೀರಿಗೆ, ಬೆಳ್ಳುಳ್ಳಿ, ಅರಶಿನವನ್ನು ಮಿಶ್ರ ಮಾಡುವುದೂ ಇದೆ.ReplyForward

ಇತ್ತೀಚಿನ ಸುದ್ದಿ

ಜಾಹೀರಾತು