4:41 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕೊರೊನಾ ಹೆಸರಿನಲ್ಲಿ ದೋಖಾ : ಆಸ್ಪತ್ರೆಗಳ ಅಲೆದಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್

July 19, 2020, 8:46 AM

ಅಶೋಕ್ ಕಲ್ಲಡ್ಕ ಮಂಗಳೂರು

reporterkarnataka@gmail.com

ರಾಜ್ಯದಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಕೊರೊನಾ ಹೆಸರಿನಲ್ಲಿ ಅವ್ಯಾಹತವಾಗಿ ವಂಚನೆ, ಅವ್ಯವಹಾರಗಳು ನಡೆಯುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ಎಂದು ಸರಕಾರ ಪ್ರಕಟಿಸಿದರೂ ಅದಕ್ಕೂ ಸಾಕಷ್ಟು ನಿಬಂಧನೆಗಳ ಅಡ್ಡಿ ಎದುರಾಗಿದೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥನಾರಾಯಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ವೀಡಿಯೊ ಕಾನ್ಫರೆನ್ಸ್ ನಡೆಸಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸಿದ್ದರು. ಆಧಾರ್ ಕಾರ್ಡ್ ಇದ್ದರೆ ಸಾಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಕೂಡ ಹೇಳಿದ್ದರು.

ಖಾಸಗಿ ಇರಲಿ, ಸರಕಾರಿ ಇರಲಿ ರೋಗಿಗಳಿಂದ ಹಣ ಪಡೆಯುವಂತಿಲ್ಲ. ವಿಶೇಷವಾಗಿ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ರೋಗಿಗಳನ್ನು ಚಿಕಿತ್ಸೆಗೆ ಲಭ್ಯವಿರುವ ಆಸ್ಪತ್ರೆಗಳಿಗೆ ಕಳುಹಿಸಬೇಕು. ವಿನಾ ಕಾರಣ ಅಲೆದಾಡಿಸಬಾರದು. ತಕ್ಷಣ ಹಾಸಿಗೆ ಹಂಚಿಕೆಯಾಗಬೇಕೆಂದು ಡಿಸಿಎಂ ಸೂಚನೆ ನೀಡಿದ್ದರು.

ಸರಕಾರದ ಪರವಾಗಿ ಇಷ್ಟೆಲ್ಲ ಆದೇಶ, ಸೂಚನೆಗಳು ಬಂದರೂ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಹೋದರೆ, ಜಿಲ್ಲಾಸ್ಪತ್ರೆ ವೆನ್ಲಾಕ್ ನಿಂದ ರೆಫರೆನ್ಸ್ ಲೆಟರ್ ತನ್ನಿ ಎಂದು ಹೇಳುತ್ತಾರೆ. ನ್ಯಾಷನಲ್ ಇನ್ಸೂರೆನ್ಸ್ ಕಂಪನಿ, ಒರಿಯೆಂಟಲ್ ಇನ್ಸೂರೆನ್ಸ್ ಕಂಪನಿ, ಕರ್ಣಾಟಕ ಬ್ಯಾಂಕ್ ಮುಂತಾದವರು ಹೊರತಂದ ಇನ್ಸೂರೆನ್ಸ್ ಕ್ಲೈಮ್ ಬಗ್ಗೆ ವಿಚಾರಿಸಿದರೆ ಟಿಪಿಎ (ಥರ್ಡ್ ಪಾರ್ಟಿ) ಯಾರು ಎಂದು ಕೇಳುತ್ತಾರೆ. ಇನ್ಸೂರೆನ್ಸ್ ಕಂಪನಿಗಳು ಜನರಿಂದ ಹಣ ಪಡೆಯುವಾಗ ಸರಿಯಾದ ಮಾಹಿತಿ ನೀಡದಿರುವುದು ಇದಕ್ಕೆಲ್ಲ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು