4:27 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೊರೊನಾ ಹೆಸರಿನಲ್ಲಿ  ರಾಜ್ಯ ಸರಕಾರ ಭ್ರಷ್ಟಾಚಾರ: ದ.ಕ. ಕಾಂಗ್ರೆಸ್ ಆರೋಪ

July 23, 2020, 11:21 AM

ಮಂಗಳೂರು (reporterkarnataka news);

ರಾಜ್ಯ ಬಿಜೆಪಿ ಸರಕಾರ ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊರೊನಾ ಕಿಟ್ ಖರೀದಿ, ಔಷಧಿ ಖರೀದಿ, ಸರಕಾರಿ ಆಸ್ಪತ್ರೆಗಳನ್ನು ನಿರ್ವಹಿಸುವಲ್ಲಿ, ಹೊಸ ಆಸ್ಪತ್ರೆಗಳ‌ ನಿರ್ಮಾಣಗಳಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜನತೆ ಕೊರೊನಾ ಸೋಂಕನ್ನು ಎದುರಿಸುತ್ತಿರುವ ಈ ಸಂದರ್ಭ ಸರಕಾರದ ವೈಫಲ್ಯಗಳನ್ನು ಕಾಂಗ್ರೆಸ್ ಎತ್ತಿತೋರಿಸುತ್ತಿದೆ. ಇದೇ ರೀತಿ ಸರಕಾರದ ವೈಫಲ್ಯತೆ ಮುಂದುವರಿದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಸರಕಾರದ ನಿರ್ಲಕ್ಷ್ಯ ಸೋಂಕು ಹೆಚ್ಚಲು ಕಾರಣ

ಕೊರೊನಾ ಸೋಂಕು ತನ್ನ ಪ್ರಭಾವವನ್ನು ಬೀರಿ ಸುಮಾರು 4 ತಿಂಗಳು ಕಳೆದಿದೆ. ತಿಂಗಳುಗಳ ಕಾಲ ಲಾಕ್ ಡೌನ್ ಮಾಡಿದ ಸಂದರ್ಭದಲ್ಲಿ ಸರಕಾರಕ್ಕೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಾಕಷ್ಟು ಸಮಯಗಳಿದ್ದರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ರಾಜ್ಯದಲ್ಲಿ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುವಂತಾಗಿದೆ. ಸೋಂಕಿನ ಬಗ್ಗೆ ಜನರು ಭಯಭೀತರಾಗಿದ್ದು, ಬಡವರು ಉದ್ಯೋಗವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಆದ್ದರಿಂದ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ರಿಂದ ತೊಡಗಿ ಗ್ರಾಪಂ ಸದಸ್ಯರವರೆಗೆ ಎಲ್ಲರೂ ಇಂದು ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಎದುರಾಗಿದೆ. ಮುಂದೆಯೂ ಇದೇ ರೀತಿ ಸರಕಾರ ಕೊರೊನಾ ಸೋಂಕು ನಿಭಾಯಿಸುವಲ್ಲಿ ವಿಫಲವಾದಲ್ಲಿ ಮತ್ತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಹರೀಶ್ ಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು