7:54 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕೊರೋನಾ ಖರೀದಿ ಹಗರಣ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

July 23, 2020, 8:11 AM

ಬೆಂಗಳೂರು(reporterkarnatakanews):  

ರಾಜ್ಯದಲ್ಲಿ ಕೊರೋನಾ ನಿಯಂತ್ರಣದ ಹೆಸರಿನಲ್ಲಿ 2000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ದ ದಾಖಲೆ ಸಮೇತ ಆರೋಪಗಳ ಸುರಿಮಳೆ ಮಾಡಿದರು.

ಈ ಹಗರಣ ಸಂಬಂಧ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ಖರೀದಿಸಲಾಗಿದೆ. ಕಲಬುರ್ಗಿ ಮತ್ತು ರಾಮ ನಗರಕ್ಕೆ ಕಳಪೆ ಗುಣ ಮಟ್ಟದ ಸ್ಯಾನಿಟೈಸರ್ ಕಳುಹಿಸಿಕೊಡಲಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ವೆಂಟಿಲೇಟರ್ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ಆರಂಭದ ಮೂರು ತಿಂಗಳು ಮೌನವಾಗಿದ್ದೆವು. ಸರ್ಕಾರಕ್ಕೆ ಎಲ್ಲ ಸಹಕಾರ ನೀಡಿದ್ದೆವು. ಆದರೆ ಕಣ್ಣಮುಂದೆ ಭ್ರಷ್ಟಾಚಾರ ನಡೆಯುವಾಗ ಅದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ ಎಂದು  ಸಿದ್ದರಾಮಯ್ಯ  ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು