ಇತ್ತೀಚಿನ ಸುದ್ದಿ
ಕೊರೋನಾ ಸಾಮಗ್ರಿ ಖರೀದಿ ಹಗರಣ: ಕಾಂಗ್ರೆಸ್ ನಾಯಕರು ಗರಂ
July 23, 2020, 6:43 AM

ಬೆಂಗಳೂರು(reporterskarnatakanews): ಕೊರೋನಾ ನಿಯಂತ್ರಣ ಉಪಕರಣ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ರಾಜ್ಯ ಸರ್ಕಾರ ಪುನರುಚ್ಚರಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ಇದನ್ನು ತಳ್ಳಿಹಾಕಿದ್ದಾರೆ.
ಬ್ರಹ್ಮಾಂಡ ಭ್ರಷ್ಟಾಚಾರ ಎಸಗಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಮಹತ್ವದ ಪತ್ರಿಕಾಗೋಷ್ಠಿ ಕರೆದಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ, ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಹಗರಣ ಸಂಬಂಧ ಕೆಲವು ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ಸುಳ್ಳು ಆರೋಪ ಮಾಡಬೇಡಿ. ಯಾವುದೇ ದಾಖಲೆ ಕೇಳಿ. ಅದನ್ನು 24 ಗಂಟೆಯೊಳಗೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದರು.