ಇತ್ತೀಚಿನ ಸುದ್ದಿ
ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
August 2, 2020, 12:43 PM

ನವದೆಹಲಿ(reporterkarnatakanews): ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರನ್ನು ದೆಹಲಿಯ ಆಸ್ಪತ್ರೆಗೆ ಸೇರಿಸಲಾಗಿದೆ.
ಶನಿವಾರ ಜ್ವರ ಬಂದ ಕಾರಣ ಅಮಿತ್ ಶಾ ಅವರು ಕೊರೋನಾ ಪರೀಕ್ಷೆ ನಡೆಸಿದ್ದರು. ಇದರ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಮುನ್ನೆಚ್ಚರಿಕೆಯಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ದೆಹಲಿಯಲ್ಲಿ ಕೊರೋನಾ ನಿಯಂತ್ರಿಸಲು ಅಮಿತ್ ಶಾ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ.
ಅಮಿತ್ ಶಾ ಅವರಿಗೆ ರೋಗ ಎಲ್ಲಿಂದ ಬಂತು ಎಂಬುದು ಇದುವರೆಗೆ ಪತ್ತೆಯಾಗಿಲ್ಲ