ಇತ್ತೀಚಿನ ಸುದ್ದಿ
ಜಿಲ್ಲಾಧಿಕಾರಿ ವಿರುದ್ಧ ವಾಟ್ಸಾಪ್ ಸಂದೇಶಕ್ಕೆ ಎಲ್ಲೆಡೆ ತೀವ್ರ ಆಕ್ರೋಶ
July 28, 2020, 9:17 AM

ಮಂಗಳೂರು(reporterkarnataka news): ಅಕ್ರಮ ಗೋ ಸಾಗಾಣಿಕೆಯ ಕುರಿತು ಜಿಲ್ಲಾಧಿಕಾರಿ ನೀಡಿರುವ ಹೇಳಿಕೆಗೆ ಹಿಂದೂ ಪರ ಸಂಘಟನೆಯೊಂದರ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತವಾದ ಅಭಿಪ್ರಾಯವೊಂದಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತದೆ.
ಹಿಂದೂಗಳ ಆರಾಧ್ಯ ದೇವರೊಬ್ಬರ ಹೆಸರಿನಲ್ಲಿ ಮಾಡಲಾದ ವಾಟ್ಸಾಪ್ ಗ್ರೂಪ್ ನಲ್ಲಿ ಜಿಲ್ಲಾಧಿಕಾರಿ ವಿರುದ್ಧ ವ್ಯಕ್ತಿಯೊಬ್ಬ ಪ್ರಚೋದನಕಾರಿಯಾದ ಅಭಿಪ್ರಾಯ ವ್ಯಕ್ತಪಡಿಸಿದ್ದ. ವಾಟ್ಸಾಪ್ ಗ್ರೂಪ್ ನಲ್ಲಿ ನಡೆದ ಸಂದೇಶ ವಿನಿಮಯದ ತುಣುಕು ಮಂಗಳವಾರ ಬೆಳಗ್ಗಿನಿಂದ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಕುರಿತು ವ್ಯಕ್ತಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸುವ ಸಾಧ್ಯತೆಗಳಿವೆ.