11:28 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಜು.31ರಿಂದ ವರ್ಲ್ಡ್ ಪ್ರೀಮಿಯರ್‌ನಲ್ಲಿ ‘ಹವಾಲ’ ಹವಾ..!!!!

July 19, 2020, 2:55 PM

ಮಂಗಳೂರು(reporterkarnataka news): ವಿನೂತನವಾದ ಕಥಾ ಹಂದರ ಹೊಂದಿರುವ `ಹವಾಲ’ ಚಿತ್ರ ನಿರ್ಮಾಣಗೊಂಡಿದ್ದು, ಇದೇ ಜುಲೈ 31ರಂದು ವರ್ಲ್ಡ್ ಪ್ರೀಮಿಯರ್( ಒಟಿಟಿ) ಮೂಲಕ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಕೊರೊನಾ ಹಾಗೂ ಲಾಕ್ ಡೌನ್ ಬಿಸಿ ಎಲ್ಲ ಕ್ಷೇತ್ರಗಳಿಗೆ ತಟ್ಟಿದಂತೆ ಸಿನಿಮಾ ಜಗತ್ತಿಗೂ ಪರಿಣಾಮ ಬೀರಿದೆ. ಇವೆಲ್ಲದರ ನಡುವೆ ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರದ ನಿರ್ಮಾಣವನ್ನು ನಿರ್ಮಾಪಕ ಪುತ್ತೂರಿನ ಪ್ರವೀಣ್ ಶೆಟ್ಟಿ ಅವರು ಮಾಡಿದ್ದಾರೆ. ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ ಎಂದು ಚಿತ್ರದ ಅಸೋಸಿಯೇಟ್ ಡೈರೆಕ್ಟರ್ ಸಂತೋಷ್ ಕೊಲ್ಯ ಹೇಳುತ್ತಾರೆ.

ಆಪಲ್ಸ್ ಆಂಡ್ ಪಿಯರ್‍ಸ್ ಫಿಲ್ಮಿ ಮೈಸ್ಟಿಕ್ಸ್  ಬ್ಯಾನರ್ ನಡಿ ಚಿತ್ರವಾಗಿದ್ದು, ಅಗ್ನಿಸಾಕ್ಷಿ ಖ್ಯಾತಿಯ ಅಮಿತ್ ರಾವ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಉದಯೋನ್ಮುಖ ಸಂಗೀತ ನಿರ್ದೇಶಕರಾದ ಕಿಶೋರ್ ಎಕ್ಸಾ ಎರಡು ಭಾಷೆಗಳಲ್ಲೂ ಸಾಹಿತ್ಯ ಬರೆದು ರಾಗ ಸಂಯೋಜಿಸಿದ್ದಾರೆ.
ಶ್ರೀನಿವಾಸ್ ಮತ್ತು ಅಮಿತ್ ರಾವ್ ನಾಯಕ ನಟರಾಗಿ ಹಾಗೂ ಕಮಲಿ ಧಾರಾವಾಹಿ ಖ್ಯಾತಿಯ ಅಮೂಲ್ಯ ಗೌಡ ಮತ್ತು ಕಿರುತೆರೆ ನಟಿ ಸಹನಾ ಪೂಜಾರಿ ನಾಯಕಿ ನಟಿಯರಾಗಿ ಅಭಿನಯಿಸಿದ್ದಾರೆ. ನಿರ್ದೇಶನ ವಿಭಾಗದಲ್ಲಿ ಚೆನ್ನೈ ಮೂಲದ ಎಸ್.ಪಿ. ಸೆಲ್ವಂ ಜೊತೆ ಸ್ಥಳೀಯರಾದ ರಾಜ್ ಕೃಷ್ಣ ಉಡುಪಿ ಸಹನಿರ್ದೇಶಕರಾಗಿ ಹಾಗೂ ಸಂತೋಷ್ ಕೊಲ್ಯ ಮತ್ತು ಹೆನ್ಲಿ ವಿಶಾಲ್ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮೊತ್ತಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ತುಳುನಾಡಿಗೆ ಸಂಬಂಧ ಪಟ್ಟ ದೃಶ್ಯಗಳನ್ನು ಸಂಯೋಜಿಸಿದ್ದು, ತುಳು ಭಾಷೆಯ ಸೊಗಡು ಮತ್ತು ಹುಲಿವೇಷ ವನ್ನೊಳಗೊಂಡ ದೃಶ್ಯವೊಂದು ಚಿತ್ರದ ಹೈಲೈಟ್ ಆಗಿದೆ. ಸಿನಿಮಾ ಪ್ರಿಯರು ವರ್ಲ್ಡ್ ಪ್ರೀಮಿಯರ್‌ನಲ್ಲಿ ಹವಾಲ ಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಸಂತೋಷ್ ಕೊಲ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು