ಇತ್ತೀಚಿನ ಸುದ್ದಿ
ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾಕ್ಕೆ 648 ಬಲಿ
July 22, 2020, 5:21 AM

ನವದೆಹಲಿ(reporterkarnatakanews):
ಮಾರಕ ಕೊರೋನಾ ದೇಶದಲ್ಲಿ ಒಂದೇ ದಿನ 648 ಮಂದಿಯ ಬಲಿ ಪಡೆದುಕೊಂಡಿದೆ. ಇದೀಗ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 28, 732ಕ್ಕೆ ತಲುಪಿದೆ. ದಕ್ಷಿಣ ಭಾರತದ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.
ಕಳೆದ 24 ಗಂಟೆಯಲ್ಲಿ ಹೊಸದಾಗಿ 37, 724 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11, 92, 915ಕ್ಕೆ ತಲುಪಿದೆ. ಆಸ್ಪತ್ರೆಗಳಲ್ಲಿ 4 , 11, 133 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕೊರೋನಾ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ ಡೌನ್ ಕರ್ನಾಟಕದಲ್ಲಿ ಕೊನೆಗೊಂಡಿದ್ದು, ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.