4:56 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ : ಇನ್ಮುಂದೆ ಯೂಟ್ಯೂಬ್ ಪ್ರಿ- ರೆಕಾರ್ಡೆಡ್ ತರಗತಿ

July 22, 2020, 3:14 AM

ಬೆಂಗಳೂರು(reporterkarnataka news): 

ಕೋವಿಡ್‌-19 ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭ ಆಗದೇ ಇರುವುದರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮೂಲಕ ಪ್ರೀ-ರೆಕಾರ್ಡೆಡ್‌ ತರಗತಿ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಪ್ರಸಾರವಾಗಲಿರುವ ವಿಡಿಯೊ ಪಾಠಗಳ ವೇಳಾಪಟ್ಟಿಯನ್ನು ಇಲಾಖೆ ಮಂಗಳವಾರ ಪ್ರಕಟಿಸಿದೆ. ಗುರುವಾರದಿಂದ (ಜುಲೈ 23) ತರಗತಿಗಳು ಪ್ರಸಾರ ಆಗಲಿದ್ದು, ಪ್ರತಿದಿನ 45 ನಿಮಿಷಗಳ 4 ಅವಧಿಯ ತರಗತಿಗಳು (ಪ್ರತಿ ವಿಷಯಕ್ಕೆ ಎರಡು ಅವಧಿ, ಒಂದು ಅವಧಿಯಲ್ಲಿ ವಿಡಿಯೊ ತರಗತಿ, ಎರಡನೇ ಅವಧಿಯಲ್ಲಿ ಈ ತರಗತಿಗೆ ಸಂಬಂಧಿಸಿದ ಸಂದೇಹ ನಿವಾರಣೆ, ನೋಟ್ಸ್‌, ಬರವಣಿಗೆ) ಇರಲಿದೆ. ಆಯಾ ಕಾಲೇಜಿನ, ಆಯಾ ವಿಷಯಗಳ ಉಪನ್ಯಾಸಕರು ಈ ಬಗ್ಗೆ ನಿಗಾ ವಹಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

ಯೂಟ್ಯೂಬ್‌ ಲಿಂಕ್‌ನ್ನು (https://www.youtube.com/c/dpuedkpucpa) ಜಿಲ್ಲಾ ಉಪ ನಿರ್ದೇಶಕರು ಪ್ರಾಂಶುಪಾಲರು, ಅಲ್ಲಿಂದ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತಲು‍ಪಿಸಿ ಪ್ರತಿ ದಿನ ತರಗತಿಗಳನ್ನು ವೀಕ್ಷಿಸಲು ಪ್ರೇರೇಪಿಸಬೇಕು. ಆಯಾ ಪಾಠಕ್ಕೆ ಸಂಬಂಧಿಸಿದ ನೋಟ್ಸ್‌ಗಳು ಅದೇ ದಿನ ಲಭ್ಯವಾಗಲಿವೆ. ವೇಳಾಪಟ್ಟಿಯಂತೆ ವಿಡಿಯೊ ವೀಕ್ಷಿಸಲು ಸಾಧ್ಯವಾಗದಿದ್ದರೆ, ಲಿಂಕ್‌ ಬಳಸಿ ಬೇರೆ ದಿನಗಳಲ್ಲಿ ಮತ್ತು ಪುನರಾವರ್ತಿತವಾಗಿ ವೀಕ್ಷಿಸಬಹುದು.

ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ವಿಷಯವಾರು ಉಪನ್ಯಾಸಕರಿಗೆ ವಿಂಗಡಿಸಿ ಅಪ್‌ಲೋಡ್‌ ಆಗಿರುವ ಪ್ರಿ-ರೆಕಾರ್ಡೆಡ್‌ ವಿಡಿಯೊ ವೀಕ್ಷಿಸಲು ಸೂಚಿಸಬೇಕು. ಸಂದೇಹಗಳಿದ್ದರೆ ಅದನ್ನು ಉಪನ್ಯಾಸಕರು ವಾಟ್ಸ್‌ಆಯಪ್‌, ದೂರವಾಣಿ ಮೂಲಕ ಪರಿಹರಿಸಬೇಕು ಎಂದೂ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು