ಇತ್ತೀಚಿನ ಸುದ್ದಿ
ನಿಗಮ ಮಂಡಳಿ ನೇಮಕ ವಿವಾದ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ
July 28, 2020, 6:57 AM

ಬೆಂಗಳೂರು(reporterkarnataka news):
ರಾಜ್ಯದಲ್ಲಿ ಬಿಜೆಪಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ದಿಢೀರನೆ ಮಾಡಲಾದ ನಿಗಮ ಮಂಡಳಿ ನೇಮಕಾತಿ ಅಪಸ್ವರದ ಅಲೆಯನ್ನೆ ಸೃಷ್ಟಿಸಿದೆ. ಸಚಿವ ಸ್ಥಾನದ ಕನಸು ಕಾಣುತ್ತಿದ್ದ ಹಲವರಿಗೆ ನಿಗಮ ಮಂಡಳಿ ನೇಮಕಾತಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇದು ಅಸಮಾಧಾನಕ್ಕೆ ಕಾರಣವಾಗಿದೆ.
ಕೊರೊನಾ ಮಹಾಮಾರಿ ರಾಜ್ಯದಲ್ಲಿ ಅಬ್ಬರಿಸುತ್ತಿರುವ ಈ ಸಂದರ್ಭದಲ್ಲಿ ನಿಗಮ ಮಂಡಳಿ ನೇಮಕಾತಿಗೆ ಶಾಸಕರು ಬಹಿರಂಗವಾಗಿ ಒತ್ತಡ ಹೇರಿರಲಿಲ್ಲ. ಪರಿಸ್ಥಿತಿ ಹೀಗಿದ್ದರೂ ಸಿಎಂ ಯಡಿಯೂರಪ್ಪ ತರಾತುರಿಯಲ್ಲಿ ಯಾಕೆ ನಿರ್ಧಾರ ಕೈಗೊಂಡಿದ್ದಾರೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ.
ಹವು ಹಿರಿಯ ಬಿಜೆಪಿ ಶಾಸಕರು ಶಾಸಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚಿಸದೆ ಸಿಎಂ ಯಡಿಯೂರಪ್ಪ ಏಕಪಕ್ಷೀಯವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿ ಬಂದಿದೆ.