ಇತ್ತೀಚಿನ ಸುದ್ದಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಭಾರತ ಸೇನಾ ನೆಲೆಗೆ ದಾಳಿ
August 4, 2020, 3:45 AM

ಶ್ರೀನಗರ(reporterkarnataka news):
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಉಪಟಳ ಮುಂದುವರಿದಿದೆ. ಪೂಂಛ್ ಜಿಲ್ಲೆಯ ಕೃಷ್ಣಾ ಘಾಟಿ ಪ್ರದೇಶದಲ್ಲಿ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಭಾರತದ ಸೇನಾ ನೆಲೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದೆ.
ಪಾಕ್ ಕೃತ್ಯಕ್ಕೆ ಭಾರತದ ಯೋಧರು ಗುಂಡಿನಿಂದಲೇ ಪ್ರತ್ಯುತ್ತರ ನೀಡಿದ್ದಾರೆ. ಕಳೆದ ಹಲವು ತಿಂಗಳಿನಿಂದ ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿದೆ. ಎರಡು ದಿನಗಳ ಹಿಂದೆ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಯೋಧನೊಬ್ಬ ಹುತಾತ್ಮರಾಗಿದ್ದರು