ಇತ್ತೀಚಿನ ಸುದ್ದಿ
ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕರ್ತವ್ಯಕ್ಕೆ ಹಾಜರು
July 21, 2020, 10:33 AM

ಬೆಂಗಳೂರು(reporterkarnataka news):
ಕಾರು ಚಾಲಕನಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಕೊರೋನಾ ಪರೀಕ್ಷಾ ವರದಿ ಕೈ ಸೇರಿದೆ. ಇದು ನೆಗೆಟಿವ್ ಎಂಬುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.
ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಎಲ್ಲರಿಗೂ ಭಾಸ್ಕರ್ ರಾವ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಪೊಲೀಸರ ಮೇಲೆ ದಾಳಿ ನಡೆಸಿದ್ದು, ನೂರಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ.