2:35 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಫ್ರಾನ್ಸ್ ನಿಂದ ಹೊರಟು ಅಂಬಾಲ ವಾಯುನೆಲೆಗೆ ಬಂದಿಳಿದ  ರಫೇಲ್ ಯುದ್ಧ ವಿಮಾನ

July 29, 2020, 10:28 AM

ನವದೆಹಲಿ(reporterkarnataka news):

ಫ್ರಾನ್ಸ್ ನಿಂದ ಹೊರಟ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನ ಇಂದು ಭಾರತದ ಅಂಬಾಲ ವಾಯುನೆಲೆಯಲ್ಲಿ ಸುರಕ್ಷಿತವಾಗಿ  ಬಂದಿಳಿಯಿತು. ವಾಯುಪಡೆಯ ಸುಖೋಯ್ ಎರಡು ವಿಮಾನಗಳ ಬೆಂಗಾವಲಿನ ಜತೆ ಈ ಐದು ವಿಮಾನಗಳು ವಾಯುನೆಲೆಗೆ ಆಗಮಿಸಿದವು. ಅಂಬಾಲ ವಾಯುನೆಲೆ ದೇಶದ ಅತ್ಯಂತ ಪುರಾತನ ವಾಯುನೆಲೆಗಳಲ್ಲಿ ಒಂದಾಗಿದೆ. 1971ರ ಯುದ್ದದಲ್ಲಿ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ನಡೆಸಿತ್ತು. ವಾಯುಪಡೆ ಮುಖ್ಯಸ್ಥರು ಸೇರಿದಂತೆ ಹಿರಿಯ ಸೇನಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಭಾರತದ ವಾಯು ಪ್ರದೇಶ ಪ್ರವೇಶಿಸಿದ ಕೂಡಲೇ ರಫೇಲ್ ಯುದ್ಧ ವಿಮಾನ ಅರಬಿ ಸಮುದ್ರದಲ್ಲಿ ಇದ್ದ ಐಎನ್ಎಸ್ ಕೊಲ್ಕತ್ತಾ ಜತೆ ಸಂಪರ್ಕ ಸಾಧಿಸಿತು. ರಕ್ಷಣಾ ಸಚಿವ  ರಾಜನಾಥ್ ಸಿಂಗ್ ರಫೇಲ್  ಭಾರತದ ವಾಯು ಪ್ರದೇಶ ಪ್ರವೇಶಿಸಿರುವುದನ್ನು ಅಧಿಕೃತವಾಗಿ   ಪ್ರಕಟಿಸಿದರು, ಹಕ್ಕಿಗಳು ಭಾರತ ಪ್ರವೇಶಿಸಿದೆ ಎಂದು ಅವರು ಟ್ವೀಟ್ ಮಾಡಿದ್ದರು. 

ಮೊದಲ ಹಂತವಾಗಿ ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು