ಇತ್ತೀಚಿನ ಸುದ್ದಿ
ಬಾಬರಿ ಮಸೀದಿ ಧ್ವಂಸ ಪ್ರಕರಣ: ಸಿಬಿಐ ಕೋರ್ಟ್ ನಲ್ಲಿ ಇಂದು ಅಡ್ವಾಣಿ ಹೇಳಿಕೆ ದಾಖಲು
July 24, 2020, 5:17 AM

ನವದೆಹಲಿ(reporterkarnatakanews):
ಬಾಬರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ಬಿಜೆಪಿ ವರಿಷ್ಠ ನಾಯಕ ಎಲ್ ಕೆ. ಅಡ್ವಾಣಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದ ಷಡ್ಯಂತ್ರ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಬಿಜೆಪಿಯ ಇನ್ನೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಗುರುವಾರ ತಮ್ಮ ಹೇಳಿಕೆ ದಾಖಲಿಸಿದ್ದರು. ಅಡ್ವಾಣಿ ಅವರ ಹೇಳಿಕೆ ಭಾರೀ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಈಗಾಗಲೇ ಮಾತುಕತೆ ನಡೆಸಿದ್ದಾರೆ
ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಅಡ್ವಾಣಿ ಅವರು ನಡೆಸಿದ ರಥಯಾತ್ರೆ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು.