ಇತ್ತೀಚಿನ ಸುದ್ದಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು: ಪ್ರಧಾನಿಗೆ ಸಹೋದರಿ ಶ್ವೇತಾ ಪತ್ರ
August 1, 2020, 7:39 AM

ಪಾಟ್ನ(reporterkarnataka news): ದಿನಕಳೆದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಕುರಿತು ಹೊಸ ಹೊಸ ವಿಷಯಗಳು ಹೊರ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ಕುರಿತು ತನಿಖೆ ನಡೆಸಬೇಕು ಎಂದು ಕೋರಿ ಅವರ ಸಹೋದರಿ ಶ್ವೇತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸಿನೆಮಾ ರಂಗದಲ್ಲಿ ಸುಶಾಂತ್ ಸಿಂಗ್ ಸ್ವಂತ ಪ್ರತಿಭೆ ಮತ್ತು ಪರಿಶ್ರಮದಿಂದ ಯಶಸ್ವಿಯಾಗಿದ್ದ ಎಂದು ಶ್ವೇತಾ ಸಿಂಗ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಇನ್ನೊಂದೆಡೆ ತನಿಖೆ ಸಂಬಂಧ ಮುಂಬೈಗೆ ಆಗಮಿಸಿರುವ ಬಿಹಾರ ಪೊಲೀಸರಿಗೆ ಸ್ಥಳೀಯ ಪೊಲೀಸರು ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.
ಸುಶಾಂತ್ ಸಿಂಗ್ ತನಿಖೆಯ ವಿಷಯದಲ್ಲಿ ರಾಜಕೀಯ ಬೆರಸಬೇಡಿ ಎಂದು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನವಿ ಮಾಡಿದ್ದಾರೆ.