4:56 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಬಿಜೆಪಿಯೊಳಗಿನ ಅಧಿಕಾರ ಸಮರಕ್ಕೆ ಲಾಲಾಜಿ ಬಲಿಪಶು: ಮಧ್ಯಾಹ್ನ ಕೊಟ್ಟು ಸಂಜೆ ಕಿತ್ತು ಬಿಟ್ಟರು!

July 27, 2020, 5:12 PM

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪಟ್ಟಿ ಹೊರಬೀಳುತ್ತಿದ್ದಂತೆ ಅಸಮಾಧಾನದ ಜ್ವಾಲಾಮುಖಿ ಸ್ಫೋಟಗೊಂಡಿದೆ. ಇದರ ಪರಿಣಾಮ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಬಲಿಪಶುವಾಗಿದ್ದಾರೆ.  

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಸ್ಥಾನಕ್ಕೆ ಲಾಲಾಜಿ ಮೆಂಡನ್ ಅವರನ್ನು ನೇಮಿಸಲಾಗಿತ್ತು. ಸೋಮವಾರ ಮಧ್ಯಾಹ್ನದ ವೇಳೆಗೆ ನೇಮಕ ಪಟ್ಟಿ ಹೊರಬಿದ್ದಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ಲಾಲಾಜಿ ಮೆಂಡನ್ ಸೇರಿದಂತೆ ನಾಲ್ವರನ್ನು ಕೈಬಿಟ್ಟಿರುವ ಆದೇಶ ಹೊರ ಬಿದ್ದಿದೆ. ಲಾಲಾಜಿ ಅವರಿಗೆ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ವಾಪಸ್ ಪಡೆದಿದೆ ರಾಜ್ಯ ಸರಕಾರ. ಬಿಜೆಪಿಯೊಳಗಿನ ಅಧಿಕಾರ ಸಮರಕ್ಕೆ ಮೆಂಡನ್ ಅವರನ್ನು ಬಲಿಪಶು ಮಾಡಿರುವ ಕುರಿತು ಪಕ್ಷದ ಸಾಮಾನ್ಯ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯೊಳಗೆ ಸ್ಫೋಟಗೊಂಡ ಅಸಮಾಧಾನದ ಪರಿಣಾಮ ಲಾಲಾಜಿ ಮಾತ್ರವಲ್ಲ ಇನ್ನೂ ಮೂವರು ಅಧಿಕಾರ ಸ್ವೀಕರಿಸುವ ಮುನ್ನವೇ ಅಧ್ಯಕ್ಷ ಸ್ಥಾನವನ್ನು ಕಳೆದು ಕೊಂಡಿದ್ದಾರೆ. ತಿಪ್ಪಾ ರೆಡ್ಡಿ(ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮ), ಬಸವರಾಜ್ ದಡೇಸೂರ್ (ರಾಜ್ಯ ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ) ಹಾಗೂ ಪರಣ್ಣ ಮುನವಳ್ಳಿ( ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ) ಅವರು ಅಧಿಕಾರ ಸವಿಯುವುದು ಮುನ್ನವೇ ನಿರ್ಗಮಿಸಬೇಕಾದ ನಾಯಕರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚಿಸದೇ ನಿಗಮ ಮಂಡಳಿಗಳಿಗೆ ಆಯ್ಕೆ ಮಾಡಿರುವುದು ಪಕ್ಷದ ಹಿರಿಯ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ನಿಗಮ – ಮಂಡಳಿ ಆಯ್ಕೆ ಸುದ್ದಿ ಹೊರಬೀಳುತ್ತಿದ್ದಂತೆ ಹೊಗೆಯಾಡುತ್ತಿದ್ದ ಅಸಮಾಧಾನ ದಿಢೀರ್ ಆಗಿ ಸ್ಫೋಟಗೊಂಡಿದೆ. ರಾಜ್ಯ ಬಿಜೆಪಿಯೊಳಗೆ ಎಲ್ಲವೂ ಸರಿಯಾಗಿಲ್ಲ ಎನ್ನುವುದನ್ನು ಇದು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು