ಇತ್ತೀಚಿನ ಸುದ್ದಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಂನ ಮೊದಲ ಸಭೆ ಇಂದು
August 3, 2020, 2:56 AM

ಬೆಂಗಳೂರು(reporterkarnatakanews):
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಹೊಸ ತಂಡದ ಮೊದಲ ಸಭೆ ಇಂದು ನಡೆಯಲಿದೆ.
ಬಿಜೆಪಿ ಮುಖ್ಯ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಾಮಾಜಿಕ ಅಂತರ ಖಾತರಿಪಡಿಸಿ ಚರ್ಚೆ ನಡೆಯಲಿದೆ.
ಎರಡು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹೊಸ ತಂಡ ಪ್ರಕಟಿಸಿದ್ದರು. ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಹಲವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಿದ್ದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಅವರಿಗೆ ಕೋಕ್ ನೀಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹೊಸ ತಂಡದಲ್ಲಿ ಉಪಾಧ್ಯಕ್ಷ ರಾಗಿದ್ದಾರೆ.