ಇತ್ತೀಚಿನ ಸುದ್ದಿ
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೋಳಂತೂರು ತರುಣ ಸಾವು
August 1, 2020, 12:09 PM

ಮೃತನನ್ನು ಬೋಳಂತರು ನಿವಾಸಿ ಉನಾಯಿಸ್(17) ಎಂದು ಹೆಸರಿಸಲಾಗಿದೆ. ಬಾಲಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ಮಂಚಿ ಮಸೀದಿಯ ಬಳಿ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ. ತಕ್ಷಣವೇ ಸ್ಥಳೀಯರು ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಮಂಗಳೂರು(reporterkarnataka news): ಮೆಲ್ಕಾರ್ ಟ್ರಾಫಿಕ್ ಠಾಣಾ ವ್ಯಾಪ್ತಿಯ ಮಂಚಿ ಮಸೀದಿ ಬಳಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.