ಇತ್ತೀಚಿನ ಸುದ್ದಿ
ಭಯೋತ್ಪಾದಕರ ವಿರುದ್ಧ ಸೇನಾ ಕಾರ್ಯಾಚರಣೆ: ಶ್ರೀನಗರ ಬಳಿ ಎನ್ ಕೌಂಟರ್
July 25, 2020, 6:35 AM

ನವದೆಹಲಿ (reporterkarnatakanews): ಜಮ್ಮು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಭಯೋತ್ಪಾದಕರನ್ನು ಮಟ್ಟಹಾಕಲು ಭದ್ರತಾಪಡೆ ಕಾರ್ಯಾಚರಣೆ ಆರಂಭಿಸಿದೆ. ಇಂದು ಮುಂಜಾನೆ ಈ ಕಾರ್ಯಾಚರಣೆ ಆರಂಭವಾಯಿತು. ಜನ ವಸತಿ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂದು ವರದಿಯಾಗಿದೆ.
ಶ್ರೀನಗರ ಹೊರವಲಯದ ರಾನ್ ಬೀ ಘಡ್ ನಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಎಷ್ಟು ಮಂದಿ ಭಯೋತ್ಪಾದಕರಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಹೆಚ್ಚುವರಿ ಭದ್ರತಾಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.
ಕಳೆದ ಆರು ತಿಂಗಳಲ್ಲಿ ಭದ್ರತಾಪಡೆ ಜಮ್ಮು ಕಾಶ್ಮೀರದಲ್ಲಿ 40ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.