7:15 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಡಿಕೆಶಿ ಎಕ್ಸ್ ಪ್ರೆಸ್ : ಕೈ ಬಲಪಡಿಸಲು ಕೆಪಿಸಿಸಿ ಅಧ್ಯಕ್ಷರ ಯಾತ್ರೆ 

July 31, 2020, 2:05 PM

ಮಂಗಳೂರು(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಂಗಳೂರಿನಲ್ಲಿ ಬಿಡುವಿಲ್ಲದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ಕಾಂಗ್ರೆಸ್ ಗೆ ಮತ್ತೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಡಿಕೆಶಿ ಅವರಿಗೆ ರಾಜ್ಯ ಕಾಂಗ್ರೆಸ್ ನ ಪಟ್ಟ ಕಟ್ಟಿದೆ.

ಪಕ್ಷದ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಬಳಿಕ ಜಿಲ್ಲೆಗೆ ಅವರ ಮೊದಲ ಭೇಟಿಯಾಗಿದೆ. ಆರಂಭದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ, ಹೈಕಮಾಂಡ್ ನ ಪ್ರಭಾವಿ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಬಿಷಪ್ ಹೌಸ್ ಗೆ ಆಗಮಿಸಿ ಬಿಷಪ್ ಅವರ ಆಶೀರ್ವಾದ ಪಡೆದರು. ಅಲ್ಲಿ ಬಿಷಪ್ ನೇತೃತ್ವದಲ್ಲಿ ಡಿಕೆಶಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. 

ಬಿಷಪ್ ಹೌಸ್ ನಿಂದ ನೇರವಾಗಿ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ಸಂಬಂಧಿಸಿದಂತೆ ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಡಿಕೆಶಿ ಅವರ ಯಾತ್ರೆ ಅಲ್ಲಿಗೆ ನಿಲ್ಲಲಿಲ್ಲ, ಮುಂದುವರಿದ ಅವರ ಪಯಣ ಕುದ್ರೋಳಿ ಗೋಕರ್ಣನಾಥ ದೇವಾಲಯದತ್ತ ಮುಖ ಮಾಡಿತು. ಅಲ್ಲಿ ಅವರನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ದೇಗುಲದ ಆಡಳಿತ ಮಂಡಳಿ ಬರ ಮಾಡಿಕೊಂಡಿತು. ಕುದ್ರೋಳಿ ದೇಗುಲದಲ್ಲಿ ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷರ ಯಾತ್ರೆ ಮತ್ತೆ ಬಂಟ್ವಾಳ ಕಡೆ ಸಾಗಿತು. ಜಿಲ್ಲಾ ಕಾಂಗ್ರೆಸ್ ನ ಶಕ್ತಿ ಕೇಂದ್ರವೆಂದೇ ಪರಿಗಣಿಸಲಾದ ಬಂಟ್ವಾಳದ ಬಿ.ಸಿ.ರೋಡ್ ಜೋಡು ಮಾರ್ಗದಲ್ಲಿ ಬಂಟ್ವಾಳ ಕಾಂಗ್ರೆಸ್ ಪರವಾಗಿ ಭವ್ಯ ಸ್ವಾಗತ ನೀಡಲಾಯಿತು. ಬಂಟ್ವಾಳದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಬೆಳ್ತಂಗಡಿಗೆ ತೆರಳಿದರು. ಅಲ್ಲಿಂದ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು