ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ
July 30, 2020, 6:48 AM

ಬೆಂಗಳೂರು(reporterkarnataka news):
ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ತಮ್ಮ ದೆಹಲಿ ಪ್ರವಾಸದ ಕುರಿತು ಅವರು ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ್ದಾರೆ.
ಸರ್ಕಾರದ ಒಂದು ವರ್ಷದ ಸಂಭ್ರಮದಲ್ಲಿ ಸವದಿ ಗೈರು ಹಾಜರಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಡಿಕೆಯ ಜತೆ ಇದನ್ನು ತಳುಕು ಹಾಕಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂಬ ಅಭಿಯಾನ ಆರಂಭವಾಗಿತ್ತು
ಇದು ಬಿಜೆಪಿ ನಾಯಕರಲ್ಲಿ ಗೊಂದಲ ಮೂಡಿಸಿತ್ತು. ಇದೀಗ ಎಲ್ಲ ವಿವಾದಗಳಿಗೆ ತೆರೆ ಎಳೆಯಲು ಸವದಿ ,ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.