10:46 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ರಾಜಧಾನಿಯಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ

July 20, 2020, 5:05 PM

ಬೆಂಗಳೂರು(reporterkarnataka news):

ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಾಜಧಾನಿ ಬೆಂಗಳೂರಿನಲ್ಲಿ ಹೇರಲಾಗಿರುವ ಲಾಕ್ ಡೌನ್ ನ್ನು ವಿಸ್ತರಿಸುವ ಸಾಧ್ಯತೆಯನ್ನು  ರಾಜ್ಯ ಸರ್ಕಾರ ತಳ್ಳಿಹಾಕಿದೆ. 

ಅಧಿಕೃತವಾಗಿ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡದಿದ್ದರೂ ಎಲ್ಲ ಸಚಿವರು ಇದೇ ಧಾಟಿಯಲ್ಲಿ ಇಂದು ಮಾತನಾಡಿದ್ದಾರೆ. ಬೆಂಗಳೂರಿನ ವಲಯ ಉಸ್ತುವಾರಿ ಸಚಿವರ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಈ ಸಂಬಂಧ ಖಡಕ್ ಆದೇಶ ನೀಡಿದ್ದಾರೆ.

ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಬದಲಿ ಮಾರ್ಗಗಳನ್ನು ಹುಡುಕಿ. ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತನ್ನಿ ಎಂಬ ಸ್ಪಷ್ಟ ಸಂದೇಶವನ್ನು ಮುಖ್ಯಮಂತ್ರಿ ಸಭೆಯಲ್ಲಿ ಭಾಗವಹಿಸಿದ ಎಲ್ಲ ಸಚಿವರಿಗೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಕಂದಾಯ ಸಚಿವ ಅಶೋಕ್ ಸೇರಿದಂತೆ ಬೆಂಗಳೂರು  ವಲಯ ಕೊರೋನಾ ನಿಯಂತ್ರಣದ ಜವಾಬ್ದಾರಿ ವಹಿಸಿರುವ ಎಲ್ಲ ಸಚಿವರು ಇಂದಿನ ಸಭೆಯಲ್ಲಿ ಭಾಗವಹಿಸಿದರು.

ಒಂದು ವಾರದ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ನಾಳೆ ಕೂಡ ಸಿಎಂ ಯಡಿಯೂರಪ್ಪ ಈ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ಭಾನುವಾರ ಜಾರಿಯಲ್ಲಿರುವ ಲಾಕ್ ಡೌನ್ ಸದ್ಯಕ್ಕೆ ಕೆಲವು ವಾರ ಮುಂದುವರಿಯುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು