ಇತ್ತೀಚಿನ ಸುದ್ದಿ
ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಸಚಿನ್ ಪೈಲಟ್ ಭವಿಷ್ಯ ಇಂದು ನಿರ್ಧಾರ
July 24, 2020, 3:57 AM

ನವದೆಹಲಿ(reporterkarnatakanews):
ರಾಜಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಮಹತ್ವದ ಹಂತ ತಲುಪಿದೆ. ಇಂದು ಹೈಕೋರ್ಟ್ ಈ ಸಂಬಂಧ ತೀರ್ಪು ನೀಡಲಿದೆ.
ಸ್ಪೀಕರ್ ಸಿ ಪಿ ಜೋಷಿ ನೀಡಿದ ನೋಟಿಸ್ ಪ್ರಶ್ನಿಸಿ ಭಿನ್ನಮತೀಯ ನಾಯಕ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ತೀರ್ಪು ಪ್ರಕಟಗೊಳ್ಳಲಿದೆ.
ರಾಜಸ್ತಾನ ಹೈಕೋರ್ಟ್ ಈ ಸಂಬಂಧ ತೀರ್ಪು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಹೈಕೋರ್ಟ್ ಈ ಹಿಂದೆ ನೀಡಿದ ಆದೇಶ ಪ್ರಶ್ನಿಸಿ ಸ್ಪೀಕರ್ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಸಫಲವಾಗದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೇಳಿದ್ದಾರೆ.