4:22 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ

July 21, 2020, 12:39 PM

ಬೆಂಗಳೂರು( reporterkarnataka news):

ಮಹಾಮಾರಿ ಕೊರೊನಾ ವೈರಸ್​ ಕಟ್ಟಿಹಾಕಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ. ಈ ಹೋರಾಟದಲ್ಲಿ ಜನರು ಸಹ ಸಹಕಾರ ನೀಡಬೇಕೆಂದು ಮನವಿ ಮಾಡಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇನ್ಮುಂದೆ ರಾಜ್ಯದಲ್ಲಿ ಲಾಕ್​ಡೌನ್ ವಿಸ್ತರಣೆ ಇಲ್ಲ ಎಂದರು.

ಮಂಗಳವಾರ ಸಂಜೆ 5 ಗಂಟೆಗೆ ಫೇಸ್​ಬುಕ್​ ಲೈವ್​ನಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು.

ದೇಶದೆಲ್ಲೆಡೆ ಕೊರೊನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ. ಜನರು ಕೋವಿಡ್​ ತೊಲಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.ಮಾಸ್ಕ್​ಗಳನ್ನು ಪ್ರತಿಯೊಬ್ಬರು ಧರಿಸಬೇಕು ಎಂದು ಮನವಿ ಮಾಡಿದರು.

ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನೀವು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಪಾಲನೇ ಮಾಡ್ತಿರೋ ಅಷ್ಟರಮಟ್ಟಿಗೆ ಕೋವಿಡ್​ ತಡೆಯಲು ನಮ್ಮಿಂದ ಸಾಧ್ಯ. ಈಗಾಗಲೇ ನಮ್ಮೆಲ್ಲ ಸಚಿವರು, ಶಾಸಕರು, ವೈದ್ಯರು, ನರ್ಸ್​ಗಳು, ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಕೋವಿಡ್​ ತಡೆಯಲು ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ, ನಾವು ಬದುಕುಳಿಯಬೇಕಾದರೆ, ಅಂತರ ಕಾಯ್ದುಕೊಳ್ಳುವುದು, ಮಾಸ್ಕ್​ ಕಡ್ಡಾಯವಾಗಿ ಧರಿಸುವುದು ಮುಂತಾದ ಕ್ರಮಗಳನ್ನು ಪಾಲಿಸುವುದರಿಂದ ಕರೊನಾ ತಡೆಯಲು ಸಾಧ್ಯ ಎಂದು ತಿಳಿಸಿದರು.

ಕೋವಿಡ್​ ನಿಯಂತ್ರಣಕ್ಕೆ ತಜ್ಞರು ಕೊಟ್ಟಿರುವ 5ಟಿ ತಂತ್ರಗಳು ಬಹಳ ಮುಖ್ಯವಾಗಿವೆ. ಅವುಗಳೆಂದರೆ ಟ್ರೇಸ್​ (ಪತ್ತೆ), ಟ್ರ್ಯಾಕ್​ (ಹುಡುಕು), ಟೆಸ್ಟ್​ (ಪರೀಕ್ಷೆ), ಟ್ರೀಟ್​ (ಚಿಕಿತ್ಸೆ) ಹಾಗೂ ಟೆಕ್ನಾಲಜಿ (ತಂತ್ರಜ್ಞಾನ) ತಂತ್ರಗಳನ್ನು ಅಳವಡಿಸಿಕೊಳ್ಳುವುದರಲ್ಲಿ ರಾಜ್ಯ ಈಗಾಗಲೇ ಮುಂಚೂಣಿಯಲ್ಲಿದೆ. ಇದರಿಂದ ಕೋವಿಡ್​ ತಡೆಯಲು ಸಾಧ್ಯ ಎಂಬುದು ನನ್ನ ನಂಬಿಕೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪತ್ತೆಯಾಗಿರುವ ಶೋಂಕಿತರಲ್ಲಿ ಶೇ.80ಕ್ಕೂ ಹೆಚ್ಚು ಸೋಂಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಇಂತಹ ಲಘು ರೋಗ ಲಕ್ಷಣ ಇರುವವರಿಗೆ ಆಸ್ಪತ್ರೆಯ ಅವಶ್ಯಕತೆ ಇಲ್ಲ ಎಂಬುದನ್ನು ರಾಜ್ಯದ ಜನ ಮನವರಿಕೆ ಮಾಡಿಕೊಳ್ಳಬೇಕು. ಅಂತಹವರನ್ನು ಮನೆಯಲ್ಲಿ ಅಥವಾ ಕೋವಿಡ್​ ಕೇರ್​ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇರಿಸಲಾಗುವುದು. ಸೋಂಕಿತರಲ್ಲಿ ಶೇ. 5 ರಷ್ಟು ಮಂದಿಗೆ ಮಾತ್ರ ಐಸಿಯು ಅಥವಾ ವೆಂಟಿಲೇಟರ್​ ಅಗತ್ಯವಿದೆ ಎಂಬುದು ಈಗಾಗಲೇ ಅನುಭವಕ್ಕೆ ಬಂದಿರುವ ಮಾತು. ಬೆಂಗಳೂರಿನಲ್ಲಿ ಕೋವಿಡ್​ ಚಿಕಿತ್ಸೆಗೆ ಈಗಾಗಲೇ 11230 ಹಾಸಿಗೆಗಳನ್ನು ಮೀಸಲಿಟ್ಟಿದ್ದೇವೆ ಎಂದರು.

ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಸರ್ವ ರೀತಿಯಲ್ಲೂ ಕೆಲಸ ಮಾಡ್ತಿದೆ. ಆತ್ಮಹತ್ಯೆಯಂತಹ ಆತುರದ ನಿರ್ಧಾರ ಬೇಡವೆಂದು ಜನರಲ್ಲಿ ಮನವಿ ಮಾಡಿದ ಬಿಎಸ್​ವೈ, ಮಹಾರಾಷ್ಟ್ರ, ತಮಿಳುನಾಡಿನಿಂದ ಬಂದ ಜನರಿಂದ ಪ್ರಕರಣಗಳು ಹೆಚ್ಚಾಗಿವೆ ಎಂದರು. ಖಾಸಗಿ ಆಸ್ಪತ್ರೆಗಳ ವಿಚಾರದಲ್ಲಿ ಗೊಂದಲ ಇದ್ದದ್ದು ನಿಜ. ಶೇ. 50 ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಹಾಗೂ ಇನ್ಮಂದೆ 24 ಗಂಟೆಯಲ್ಲಿ ಟೆಸ್ಟ್ ರಿಸಲ್ಟ್ ಸಿಗುತ್ತದೆ ಎಂದರು ತಿಳಿಸಿದರು.

ಬೆಂಗಳೂರಿನ ಎಂಟು ದಿಕ್ಕುಗಳಿಗೆ ಎಂಟು ಜನರಿಗೆ ಜವಾಬ್ದಾರಿ ಮತ್ತು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೆ, ಕೆಲ ಜಿಲ್ಲೆಗಳಲ್ಲಿ ಕೊರೊನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಮಾಡುವುದಿಲ್ಲ ಎಂದು ಬಿಎಸ್​ವೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು