ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಪ್ರವಾಹ, ಗುಡ್ಡ ಕುಸಿತ, ಇನ್ನೂ ಒಂದು ವಾರ ಮಳೆ ನಿರೀಕ್ಷೆ
August 7, 2020, 5:48 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮುಂದಿನ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ಮತ್ತು ಅಪರ ಉಪ ನದಿಗಳು ತುಂಬಿ ಹರಿಯುತ್ತಿವೆ. ದೂದ್ ಗಂಗಾ, ವೇದ್ ಗಂಗಾ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ನದಿಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ.
ಆಲಮಟ್ಟಿ ಜಲಾಶಯದ 26 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ. 93, 340 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಬಸವ ಸಾಗರ ಜಲಾಶಯ ತುಂಬಿದೆ. ಅಣೆಕಟ್ಟೆಯ 10 ಗೇಟ್ ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಮೃತ್ಯುಂಜಯ ನದಿ ತುಂಬಿ ಹರಿಯುತ್ತಿದೆ. ಚಿಕ್ಕಮಗಳೂರಿನಲ್ಲಿ ಕೂಡ ಮಳೆ ಭಾರೀ ಹಾನಿ ಮಾಡಿದೆ. ಮಳೆಯಿಂದಾಗಿ ಬಾಳೆ ಹೊನ್ನೂರ್-ಕಳಸ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಹಾಸನದಲ್ಲಿ ಹೇಮಾವತಿ ನದಿ ಅಪಾಯದ ಮಟ್ಟ ತಲುಪಿದೆ.