2:29 AM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಮ ಮಂದಿರ ಶಿಲಾನ್ಯಾಸ: ಆಡ್ವಾಣಿ, ಜೋಷಿ ವೀಡಿಯೊ ಕಾನ್ಪರೆನ್ಸ್ ಮೂಲಕ ಭಾಗಿ

August 2, 2020, 1:03 PM

ನವದೆಹಲಿ(reporterkarnataka news):

ಆಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕರಾದ ಲಾಲ್ ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ ಜೋಷಿ ಅವರು ಖುದ್ದಾಗಿ ಪಾಲ್ಗೊಳ್ಳುವುದಿಲ್ಲ, ಬದಲಿಗೆ ವೀಡಿಯೊ ಕಾನ್ಪರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.

1990ರಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಹೋರಾಟದಲ್ಲಿ ಆಡ್ವಾಣಿ ಅವರು ಮುಂಚೋಣಿಯಲ್ಲಿದ್ದರು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ 92ರ ಹರೆಯ ಆಡ್ವಾಣಿ ಹಾಗೂ ಇನ್ನೊರ್ವ ಹಿರಿಯ ನಾಯಕ 86ರ ಹರೆಯದ ಮುರಳಿ ಮನೋಹರ್ ಜೋಷಿ ಅವರು ಖುದ್ದಾಗಿ ಪಾಲ್ಗೊಳ್ಳುತ್ತಿಲ್ಲ. ಆಡ್ವಾಣಿ ಹಾಗೂ ಜೋಷಿ ಅವರಿಗೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ

ಟ್ರಸ್ಟ್ ನಿಂದ ಶುಕ್ರವಾರ ಅಧಿಕೃತ ಆಹ್ವಾನ ಬಂದಿತ್ತು. 

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಯಾದ ಆಡ್ವಾಣಿ ಅವರ ಹೇಳಿಕೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ದಾಖಲಿಸಿತ್ತು. ಸುಮಾರು 100 ಪ್ರಶ್ನೆಗಳಿಗೆ ಆಡ್ವಾಣಿ ಉತ್ತರಿಸಿದ್ದರು. ಜೋಷಿ ಅವರ ಹೇಳಿಕೆಯನ್ನು ಕೂಡ ನ್ಯಾಯಾಲಯ ದಾಖಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು