11:05 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ರೈಲ್ವೇ ಖಾಸಗೀಕರಣ ವಿರೋಧಿಸಿ ಪ್ರತಿಭಟನಾ ಪ್ರದರ್ಶನ

July 31, 2020, 3:24 PM

ಮಂಗಳೂರು (reporterkarnatakanews): ರೈಲ್ವೇ ಖಾಸಗೀಕರಣ ವಿರೋಧಿಸಿ ಹಾಗೂ ಸಾರ್ವಜನಿಕ ಉದ್ದಿಮೆಗಳ ಸರ್ವನಾಶಕ್ಕೆ ಪಣ ತೊಟ್ಟಿರುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ದ CITU ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ CITU ಕರ್ನಾಟಕ ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ ದೇಶದ ಅಭಿವೃದ್ಧಿಗೆ ಮಾರಕವಾದ ಕೇಂದ್ರದ ನರೇಂದ್ರ ಮೋದಿ ಸರಕಾರವು ದೇಶದ ಅಮೂಲ್ಯ ಸಂಪತ್ತುಗಳಾದ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಕೊಳ್ಳೆ ಹೊಡೆಯುತ್ತಿದೆ.ಕಲ್ಲಿದ್ದಲು,ವಿಮೆ,ರಕ್ಷಣೆ,ಬ್ಯಾಂಕ್,ಬಂದರು,ವಿಮಾ ನ ನಿಲ್ದಾಣ, ಸಾರಿಗೆ ಸೇರಿದಂತೆ ಎಲ್ಲವನ್ನೂ ಖಾಸಗೀಕರಣಗೊಳಿಸಿದ ಮೋದಿ ಸರಕಾರ ಇದೀಗ ಅತ್ಯಂತ ಲಾಭದಾಯಕ ಸಂಸ್ಥೆಯಾದ ರೈಲ್ವೇಯನ್ನು ಖಾಸಗೀಕರಣಗೊಳಿಸಲು ಹೊರಟಿರುವುದು ತೀರಾ ಖಂಡನೀಯವಾಗಿದೆ.

ಜನಸಾಮಾನ್ಯರು ಅತ್ಯಲ್ಪ ವೆಚ್ಚದಲ್ಲಿ ಇಡೀ ದೇಶವನ್ನು ಸುತ್ತಾಡಲು ಇರುವ ಏಕೈಕ ವ್ಯವಸ್ಥೆಯಾದ ರೈಲ್ವೇಯು ಸ್ವಾತಂತ್ರ್ಯ ಪೂರ್ವದಲ್ಲಿದ್ದು, ದೇಶವನ್ನು ಒಂದಾಗಿಸಲು ಅಪಾರ ಕೊಡುಗೆ ನೀಡಿದೆ.ಅತ್ಯಂತ ಲಾಭದಾಯಕವಾದ ರೈಲ್ವೇಯನ್ನು ಸರ್ವನಾಶಗೈಯ್ಯಲು ಹೊರಟಿರುವ ಮೋದಿ ಸರಕಾರವು ನಿಜಕ್ಕೂ ದೇಶದ್ರೋಹಿ ಸರಕಾರವಾಗಿದೆ* ಎಂದು ಆಕ್ರೋಶ ವ್ಯಕ್ತಪಡಿಸಿದರು.

CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡಿ ಕೋರೋನಾ ಸಂಧರ್ಭದಲ್ಲಿ ಪ್ರಧಾನಿಯವರು ಪ್ರಸ್ತಾಪಿಸಿದ ಆತ್ಮನಿರ್ಭರದ ಅರ್ಥ ಸ್ವಾವಲಂಬನೆಯಾಗಿದ್ದು, ಆ ಮೂಲಕ ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾಗಿದೆ.ಆದರೆ ಮೋದಿ ಸರಕಾರವು ಅದಕ್ಕೆ ವ್ಯತಿರಿಕ್ತವಾಗಿ ವರ್ತಿಸುತ್ತಿದ್ದು, ಆತ್ಮನಿರ್ಭರದ ಹೆಸರಿನಲ್ಲಿ ಇಡೀ ದೇಶವನ್ನೇ ಲೂಟಿಗೈಯ್ಯುತ್ತಿದೆ. ಅಪಾರ ಭೂ ಸಂಪತ್ತನ್ನು ಹೊಂದಿರುವ ರೈಲ್ವೇ ಸಂಪೂರ್ಣ ಖಾಸಗೀಕರಣ ಗೊಂಡರೆ ಮುಂದಿನ ಅಪಾಯವನ್ನು ದೇಶದ ಜನತೆ ಅರ್ಥೈಸಬೇಕಾಗಿದೆ. ಎಂದು ಹೇಳಿದರು.

CITU ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕ್ರಷ್ಣ ಶೆಟ್ಟಿಯವರು ಮಾತನಾಡುತ್ತಾ, ಈ ಮೊದಲೇ ದೇಶದ ಆರ್ಥಿಕತೆಯನ್ನು ಸರ್ವನಾಶಗೈದ ನರೇಂದ್ರ ಮೋದಿ ಸರಕಾರವು ಕೋರೋನಾ ಸಂದರ್ಭದಲ್ಲೂ ಮತ್ತಷ್ಟು ಜನರನ್ನು ಸಂಕಷ್ಟಕ್ಕೆ ದೂಡುವ ಮೂಲಕ ಅರ್ಥ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿದೆ.ಎಂದು ಹೇಳಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ಮುಖಂಡರಾದ ಜಯಂತಿ ಬಿ.ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಬಾಬು ದೇವಾಡಿಗ CITU ಮಂಗಳೂರು ನಗರ ನಾಯಕರಾದ ಸುರೇಶ್ ಬಜಾಲ್, ಅಶೋಕ್ ಸಾಲ್ಯಾನ್, ಕ್ರಷ್ಣಪ್ಪ ಗೌಡ, ನಾಗೇಶ್ ಕೋಟ್ಯಾನ್, ಹರೀಶ್ ಪೂಜಾರಿ,ದಯಾನಂದ ಕೊಪ್ಪಲಕಾಡು,ಮುಝಾಫರ್, ತಿಮ್ಮಯ್ಯ ಕೊಂಚಾಡಿ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು