12:39 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಂದ ಅಡಿಕೆಗೆ ಬಂತು ಬಂಗಾರದ ಬೆಲೆ: ಬೆಳೆಗಾರರಿಗೆ ಭಾರಿ ಖುಷಿ

August 2, 2020, 11:49 AM

ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಅಡಿಕೆಗೆ ವರವಾಗಿ ಪರಿಣಮಿಸಿದೆ. ವಿದೇಶದಿಂದ ಆಮದಾಗುತ್ತಿದ್ದ ಅಡಿಕೆಗೆ ಬ್ರೇಕ್ ಬಿದ್ದಿರುವುದರಿಂದ ಸ್ಥಳೀಯ ಅಡಿಕೆಗೆ ಭಾರಿ ಬೇಡಿಕೆ ಬಂದಿದೆ. ಅಡಿಕೆಯನ್ನು ಮಾರದೆ ಇನ್ನಷ್ಟು ಬೆಲೆ ಬರಲು ಬೆಳೆಗಾರರು ಕಾಯುತ್ತಿದ್ದಾರೆ.

ಕಳೆದ 5 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಬೇಡಿಕೆ ಬಂದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಅಡಿಕೆ ಬೆಳೆಸಲಾಗುತ್ತಿದೆ. ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಇದೀಗ ಬಂಗಾರದ ಬೆಲೆ ಬಂದಿದೆ. ಕೆಜಿಗೆ 200ರಿಂದ 250 ರೂ.ಗೆ ಮಾರಾಟವಾಗುತ್ತಿದ್ದ ಅಡಿಕೆಗೆ ಈಗ ಕೆಜಿಗೆ 400 ರೂ. ಲಭಿಸುತ್ತಿದೆ. ಕ್ಯಾಂಪ್ಕೋ ಶಾಖೆಗಳಲ್ಲಿ ಹೊಸ ಅಡಿಗೆ 360 ರೂ.ಗೆ ಖರೀದಿಯಾಗುತ್ತಿದೆ. ಹಳೆ ಅಡಿಕೆ 390 ರೂ.ಗೆ ಏರಿಕೆಯಾಗಿದೆ. ಖಾಸಗಿ ವಲಯದಲ್ಲಿ ಹಳೆ ಅಡಿಕೆ 400 ರೂಪಾಯಿಗೆ ಮಾರಾಟವಾಗುತ್ತಿದೆ.

ಭಾರತಕ್ಕೆ ಅಡಿಕೆ ಇಂಡೊನೇಷ್ಯಾ, ಬರ್ಮಾ, ನೇಪಾಳ ಹಾಗೂ ಬಾಂಗ್ಲಾದೇಶದಿಂದ ಆಮದು ಆಗುತ್ತಿತ್ತು. ಅಕ್ರಮವಾಗಿಯೂ ಅಡಿಕೆ ವ್ಯಾಪಕ ಪ್ರಮಾಣದಲ್ಲಿ ಗಡಿ ದಾಟಿ ಬರುತ್ತಿತ್ತು. ಇದಕ್ಕೆ ಲಾಕ್ ಡೌನ್ ನಿಂದ ಕಡಿವಾಣ ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು