8:16 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ವಂದೇ ಭಾರತ್ ಮಿಷನ್ : ವಿದೇಶದಿಂದ ಕರ್ನಾಟಕಕ್ಕೆ ಬರಲಿದೆ 66 ವಿಮಾನ

July 20, 2020, 7:57 AM

ಮಂಗಳೂರು(reporterkarnataka news):

ಕೊರೊನಾದ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಮರಳಿ ಕರೆದು ತರುವ ‘ವಂದೇ ಭಾರತ್ ಮಿಷನ್’ ನಾಲ್ಕನೇ ಹಂತದಲ್ಲಿ ಬೇರೆ ಬೇರೆ ದೇಶದಲ್ಲಿರುವ ಸುಮಾರು 11,503 ಜನ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಒಟ್ಟು 66 ವಿಮಾನಗಳು ಈ ಮಿಷನ್ ಅಡಿ ಕಾರ್ಯಾಚರಣೆ ನಡೆಸಲಿದೆ ಎಂದು ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಹೆಚ್ಚಿನ ವಿಮಾನಗಳು ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತಿದ್ದರೆ, ಕೊಲ್ಲಿ ರಾಷ್ಟ್ರಗಳಿಂದ ಕೆಲವು ವಿಮಾನಗಳು ಮಂಗಳೂರಿಗೆ ಆಗಮಿಸಲಿದೆ. ಈ ವಿಶೇಷ ವಿಮಾನಗಳನ್ನು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪನಿಗಳು ನಿರ್ವಹಿಸಲಿವೆ.

ವಿದೇಶಾಂಗ ಸಚಿವಾಲಯದ ಮಾಹಿತಿ ಪ್ರಕಾರ, ಜುಲೈ 4 ರಿಂದ ಪ್ರಾರಂಭವಾಗಿ ಆಗಸ್ಟ್ 1 ಕ್ಕೆ ನಾಲ್ಕನೇ ಹಂತದ ವಂದೇ ಭಾರತ್ ಮಿಷನ್ ಪೂರ್ಣವಾಗಲಿದೆ. ಇದರಲ್ಲಿ  ಹೆಚ್ಚಿನ ಪ್ರಯಾಣಿಕರು ಕೊಲ್ಲಿ ರಾಷ್ಟ್ರಗಳಿಂದ ಆಗಮಿಸಲಿದ್ದು ಆ ರಾಷ್ಟ್ರಗಳಿಂದ ಒಟ್ಟೂ 22 ವಿಮಾನಗಳ ಆಗಮಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು