5:46 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ವೆನ್ಲಾಕ್ ಗೆ ಹೆಚ್ಚುವರಿ 300  ಆಕ್ಸಿಜನ್ ಬೆಡ್ 

July 17, 2020, 11:05 AM

ಮಂಗಳೂರು(reporterkarnataka news)

ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಆಕ್ಸಿಜನ್ ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್ ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಂವಾದದ ನಂತರ ಮಾತನಾಡಿದ ಅವರು ಮಾಧ್ಯಮ ಜತೆ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಚರ್ಚೆಯ ಸಂದರ್ಭ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಬೆಡ್ ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್, ಸಮುದಾಯ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆಡ್’ಗಳಿಗೂ ಆಕ್ಸಿಜನ್  ಸಂಪರ್ಕ ಕಲ್ಪಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ 150 ಆಕ್ಸಿಜನ್ ಬೆಡ್’ಗಳು ಲಭ್ಯವಿದೆ. ಹೆಚ್ಚುವರಿ 300 ಬೆಡ್ ಗಳಿಗೆ ಆಕ್ಸಿಜನ್ ಸಂಪರ್ಕ ಜೋಡಿಸುವ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಕ್ಸಿಜನ್ ಬೆಡ್ ಕೊರತೆ ಉದ್ಭವಿಸದಂತೆ ತಡೆಗಟ್ಟಲು ಈ ಕ್ರಮ ಪರಿಣಾಮಕಾರಿಯಾಗಲಿದೆ ಎಂದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗೆ  ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು