ಇತ್ತೀಚಿನ ಸುದ್ದಿ
ಶಿವರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಕನ್ನಡ ಚಿತ್ರರಂಗದ ಮಹತ್ವದ ಸಭೆ, ಮುಖ್ಯಮಂತ್ರಿ ಭೇಟಿ
July 24, 2020, 3:52 AM

ಬೆಂಗಳೂರು(reporterkarnatakanews):
ಕನ್ನಡ ಚಿತ್ರರಂಗ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ.
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಎಲ್ಲ ಸಂಘಟನೆಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಿರ್ಮಾಪಕರ ಸಂಘ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸದಲ್ಲಿ ಮಾತುಕತೆ ನಡೆಯಲಿದೆ. ಸಭೆಯ ಬಳಿಕ ಚಿತ್ರರಂಗದ ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ