ಇತ್ತೀಚಿನ ಸುದ್ದಿ
ಸಂಗೀತ ಸಾಮ್ರಾಟ ಎಸ್. ಪಿ. ಬಾಲಸುಬ್ರಹ್ಮಣ್ಯಂಗೆ ಭಾರತ ರತ್ನ ?: ಆಂಧ್ರ ಸಿಎಂ ಮನವಿ ಏನು?
September 29, 2020, 8:17 AM

ಹೈದರಾಬಾದ್(reporterkarnataka news):
ನಿಧನರಾದ ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರು ಅಪೂರ್ವ ಗಾಯಕರಾಗಿದ್ದರು. ಭಾರತ ರತ್ನ ಪ್ರಶಸ್ತಿ ನೀಡಿ ಅವರನ್ನು ಗೌರವಿಸಬೇಕಾಗಿದೆ. ಅವರ ಸಾಧನೆಯನ್ನು ಗೌರವಿಸಬೇಕು ಎಂದು ಜಗನ್ ಮೋಹನ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರು ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ 40000 ಹಾಡುಗಳನ್ನು ಹಾಡಿದ್ದಾರೆ.