ಇತ್ತೀಚಿನ ಸುದ್ದಿ
ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್
July 28, 2020, 4:14 AM

ಬೆಂಗಳೂರು(reporterkarnataka news):
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹಾವಳಿ ತೀವ್ರ ಗೊಂಡಿದೆ. ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಕಚೇರಿ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಸಚಿವ ಸೋಮಶೇಖರ್ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದಾರೆ. ಒಂದು ವಾರ ಸಾರ್ವಜನಿಕರ ಭೇಟಿ ರದ್ದುಪಡಿಸಲಾಗಿದೆ.
ಚಿಕ್ಕಬಳ್ಳಾಪುರದ ಗುಡಿಬಂಡೆ ಪೊಲೀಸ್ ಠಾಣೆಯ ಪೇದೆಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.